ಚೀನಾ ಕುರಿತು ಕೇಂದ್ರ ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲ: ರಾಹುಲ್ ಗಾಂಧಿ

ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯ ತಂತ್ರವನ್ನು ಹೊಂದಿಲ್ಲದ ಕಾರಣ ದೇಶದ ರಾಷ್ಟ್ರೀಯ ಭದ್ರತೆಯು ಕ್ಷಮಿಸಲಾಗದಷ್ಟು ರಾಜಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಚೀನಾ ಕುರಿತು ಸರ್ಕಾರ ಯಾವುದೇ ಕಾರ್ಯ ತಂತ್ರವನ್ನು ಹೊಂದಿಲ್ಲದ ಕಾರಣ ದೇಶದ ರಾಷ್ಟ್ರೀಯ ಭದ್ರತೆಯು ಕ್ಷಮಿಸಲಾಗದಷ್ಟು ರಾಜಿಯಾಗಿದೆ ಎಂದು ಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಶುಕ್ರವಾರ ಆರೋಪಿಸಿದ್ದಾರೆ. ಚೀನಾ ಗಡಿ ಸಮಸ್ಯೆಯ ಬಗ್ಗೆ ವಿದೇಶಾಂಗ ವ್ಯವಹಾರಗಳ  ಸಚಿವಾಲಯ ಮತ್ತು ರಕ್ಷಣಾ ಸಿಬ್ಬಂದಿಯ ಮುಖ್ಯಸ್ಥರು ವಿಭಿನ್ನ ಅಭಿಪ್ರಾಯ ಹೊಂದಿರುವ ವರದಿಯನ್ನೊಂದನ್ನು ಅವರು ಉಲ್ಲೇಖಿಸಿದ್ದಾರೆ.

ದೇಶದ ಪ್ರದೇಶದೊಳಗೆ ಚೀನಾ ಆಗಮಿಸಿದ್ದು, ಹೊಸ ಹಳ್ಳಿಯೊಂದನ್ನು ನಿರ್ಮಾಣ ಮಾಡಿದೆ ಎಂಬುದು ಸತ್ಯವಲ್ಲ, ಹಳ್ಳಿಗಳು ಚೀನಾ ಕಡೆಯ ವಾಸ್ತವ ಗಡಿ ನಿಯಂತ್ರಣ ರೇಖೆಯಲ್ಲಿವೆ ಎಂದು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಬಿಪಿನ್ ರಾವತ್ ಗುರುವಾರ ಹೇಳಿಕೆ ನೀಡಿದ್ದರು. ಎಲ್ ಎಸಿಯ ಪೂರ್ವ ವಲಯ ಅರುಣಾಚಲ ಪ್ರದೇಶ ಮತ್ತು ಟಿಬಿಬ್ ವಲಯ ನಡುವಣದ ವಿವಾದಿತ ಪ್ರದೇಶದ ಒಳಗಡೆ ಚೀನಾ ಹೊಸ ಹಳ್ಳಿಯೊಂದನ್ನು ನಿರ್ಮಾಣ ಮಾಡುತ್ತಿರುವುದಾಗಿ ಅಮೆರಿಕಾ ರಕ್ಷಣಾ ಇಲಾಖೆ ಇತ್ತೀಚಿಗೆ ಹೇಳಿಕೆ ನೀಡಿತ್ತು.  

ಚೀನಾದ ಕಾನೂನುಬಾಹಿರ ಆಕ್ರಮಣವನ್ನು ಅಥವಾ ಯಾವುದೇ ನ್ಯಾಯಸಮ್ಮತವಲ್ಲದ ಹಕ್ಕುಗಳನ್ನು ಭಾರತ ಒಪ್ಪಿಕೊಂಡಿಲ್ಲ ಎಂದು ಅಮೆರಿಕ ವರದಿ ಕುರಿತಂತೆ ವಿದೇಶಾಂಗ ವ್ಯವಹಾರಗಳ ಸಚಿವಾಲಯ ತನ್ನ ಅಧಿಕೃತ ಹೇಳಿಕೆಯಲ್ಲಿ ತಿಳಿಸಿತ್ತು. 

ಪ್ರಧಾನಿ ನರೇಂದ್ರ ಮೋದಿ ಅವರ 56 ಇಂಚು ಎದೆ ಹೇಳಿಕೆ ವಿರುದ್ಧ ಟ್ವಿಟರ್ ನಲ್ಲಿ ವಾಗ್ದಾಳಿ ನಡೆಸಿರುವ ರಾಹುಲ್ ಗಾಂಧಿ, ಕೇಂದ್ರ ಸರ್ಕಾರ ಯಾವುದೇ ಕಾರ್ಯತಂತ್ರ ಹೊಂದಿಲ್ಲದ ಕಾರಣ ನಮ್ಮ ರಾಷ್ಟ್ರೀಯ ಭದ್ರತೆ ಕ್ಷಮಿಸಲಾಗದಷ್ಟು ರಾಜಿಯಾಗಿದೆ. ಮಿಸ್ಟರ್ 56 ಭಯಭೀತರಾಗಿದ್ದಾರೆ. ನನ್ನ ಆಲೋಚನೆಗಳು ತಮ್ಮ ಪ್ರಾಣವನ್ನು ಪಣಕ್ಕಿಟ್ಟು ನಮ್ಮ ಗಡಿಯನ್ನು ಕಾವಲು ಕಾಯುತ್ತಿರುವ ಸೈನಿಕರ ಕಡೆಯಿದ್ದರೆ,  ಭಾರತ ಸರ್ಕಾರ ಸುಳ್ಳುಗಳನ್ನು ಹೊರಹಾಕುತ್ತಿರುತ್ತದೆ ಎಂದು ಅವರು ಹೇಳಿದ್ದಾರೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com