ಚೆನ್ನೈ: ಅಸ್ವಸ್ಥ ವ್ಯಕ್ತಿಯನ್ನು ಭುಜದ ಮೇಲೆ ಹೊತ್ತು ಸಾಗಿ ಆಸ್ಪತ್ರೆಗೆ ಸಾಗಿಸಿದ ಮಹಿಳಾ ಪೊಲೀಸ್ ಗೆ ಸಿಎಂ ಗೌರವ 

ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿ ಆಟೋದಲ್ಲಿ ಆಸ್ಪತ್ರೆಗೆ ಸೇರಿಸಿದ ಚೈನ್ನೈ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೌರವಿಸಿದ್ದಾರೆ.
ಮಹಿಳಾ ಪೊಲೀಸ್ ಅಧಿಕಾರಿಗೆ ಸಿಎಂ ಗೌರವ
ಮಹಿಳಾ ಪೊಲೀಸ್ ಅಧಿಕಾರಿಗೆ ಸಿಎಂ ಗೌರವ

ಚೆನ್ನೈ: ತಮಿಳುನಾಡು ರಾಜಧಾನಿ ಚೆನ್ನೈನಲ್ಲಿ ಸುರಿಯುತ್ತಿರುವ ಭಾರಿ ಮಳೆಯಲ್ಲಿಯೇ ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ತಮ್ಮ ಭುಜದ ಮೇಲೆ ಹೊತ್ತು ಸಾಗಿ ಆಟೋದಲ್ಲಿ ಆಸ್ಪತ್ರೆಗೆ ಸೇರಿಸಿದ ಚೈನ್ನೈ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರನ್ನು ತಮಿಳುನಾಡು ಸಿಎಂ ಎಂಕೆ ಸ್ಟಾಲಿನ್ ಗೌರವಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಉನ್ನತ ಅಧಿಕಾರಿಗಳ ಉಪಸ್ಥಿತಿಯಲ್ಲಿ ರಾಜೇಶ್ವರಿ ಅವರು ಮಾನವೀಯ ಕಾರ್ಯವನ್ನು ಶ್ಲಾಘಿಸಿದ ಎಂಕೆ ಸ್ಚಾಲಿನ್ ಅವರು ಸರ್ಕಾರದಿಂದ ಪ್ರಶಂಸಾ ಪತ್ರವನ್ನು ನೀಡಿ ಗೌರವಿಸಿದ್ದಾರೆ. ಅಲ್ಲದೆ ಕಿರಿಯ ಅಧಿಕಾರಿಯ ಮಾನವೀಯ ಕಾರ್ಯಕ್ಕೆ ಹಿರಿಯ ಅಧಿಕಾರಿಗಳೂ ಕೂಡ ಶ್ಲಾಘನೆ ವ್ಯಕ್ತಪಡಿಸಿದ್ದು, 'ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ಉತ್ತಮ ಕೆಲಸ ಮಾಡಿದ್ದಾರೆ. ಜೀವನ್ಮರಣದ ನಡುವೆ ಹೋರಾಡುತ್ತಿದ್ದ ಪ್ರಜ್ಞಾಹೀನ ವ್ಯಕ್ತಿಯನ್ನು ಆಕೆಯೇ ಎತ್ತಿ ಆಸ್ಪತ್ರೆಗೆ ಕಳುಹಿಸಿದ್ದಾರೆ.

ಆಸ್ಪತ್ರೆಯಲ್ಲಿ ಯುವಕನಿಗೆ ಚಿಕಿತ್ಸೆ ನಡೆಯುತ್ತಿದ್ದು, ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಜೇಶ್ವರಿ ಅವರು ಅತ್ಯುತ್ತಮ ಅಧಿಕಾರಿಯಾಗಿದ್ದು, ಎಲ್ಲಾ ಗೌರವಗಳು ಅವರಿಗೇ ಸಲ್ಲುತ್ತವೆ ಎಂದು ಚೆನ್ನೈ ಪೊಲೀಸ್ ಆಯುಕ್ತ ಶಂಕರ್ ಜಿವಾಲ್ ಹೇಳಿದ್ದಾರೆ.

ಏನಿದು ಘಟನೆ?
ಮಳೆ ಪೀಡಿತ ಚೆನ್ನೈನ ಟಿಪಿ ಚತ್ರಂ ಸ್ಮಶಾನದ ಬಳಿ ಈ ಘಟನೆ ನಡೆದಿದ್ದು, ಸತತವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಸೂರಿಲ್ಲದೇ ನೆಂದು ಅಸ್ವಸ್ಥನಾಗಿ ಬಿದ್ದಿದ್ದ ವ್ಯಕ್ತಿಯೊಬ್ಬರನ್ನು ಮಹಿಳಾ ಪೊಲೀಸ್ ಅಧಿಕಾರಿ ರಾಜೇಶ್ವರಿ ಅವರ ಸಹಾಯದಿಂದ ಆಸ್ಪತ್ರೆಗೆ ಸೇರಿಸಲಾಗಿದೆ.

ಇದನ್ನೂ ಓದಿ: ಚೆನ್ನೈನಲ್ಲಿ ಭಾರಿ ಮಳೆ: ಅಸ್ವಸ್ಥಗೊಂಡಿದ್ದ ವ್ಯಕ್ತಿಯನ್ನು ಹೆಗಲ ಮೇಲೆ ಹೊತ್ತು ಸಾಗಿದ ಮಹಿಳಾ ಪೊಲೀಸ್, ವಿಡಿಯೋ ವೈರಲ್

ಪ್ರವಾಹ ಪೀಡಿತ ಪ್ರದೇಶದಲ್ಲಿ ಪೊಲೀಸ್ ಇನ್ಸ್ ಪೆಕ್ಟರ್ ರಾಜೇಶ್ವರಿ ಅವರು ಕರ್ತವ್ಯ ನಿರ್ವಹಿಸುತ್ತಿದ್ದರು. ಈ ವೇಳೆ ಮಳೆಯಿಂದಾಗಿ ಅಲ್ಲಿ ಮರವೊಂದು ಬಿದ್ದಿದ್ದು, ಮರವನ್ನು ತೆರವುಗೊಳಿಸುವಾಗ ಅಲ್ಲೇ ಪಕ್ಕದಲ್ಲಿ ಟಿಪಿ ಚತ್ರಂ ಸ್ಮಶಾನದ  ಬಳಿ ವ್ಯಕ್ತಿಯೋರ್ವ ಅಸ್ವಸ್ಥನಾಗಿ ಬಿದ್ದಿದ್ದನ್ನು ಅವರು ಗಮನಿಸಿದ್ದಾರೆ. ಕೂಡಲೇ ಸ್ಥಳೀಯರ ನೆರವಿನಿಂದ ಆತನನ್ನು ತಮ್ಮ ಭುಜದ ಮೇಲೆ ಹಾಕಿಕೊಂಡು ಆಟೋದಲ್ಲಿ ಹಾಕಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಅಲ್ಲದೆ ಅಸ್ವಸ್ಥ ವ್ಯಕ್ತಿಯೊಂದಿಗೆ ಮತ್ತೋರ್ವ ಸ್ಥಳೀಯನನ್ನು ಕಳುಹಿಸುವ ಮೂಲಕ ಮಾನವೀಯತೆ ಮೆರೆದಿದ್ದಾರೆ.

ಈ ವಿಡಿಯೋವನ್ನು ಸ್ಥಳೀಯರು ಚಿತ್ರೀಕರಿಸಿದ್ದು, ರಾಜೇಶ್ವರಿ ಅವರ ಕಾರ್ಯಕ್ಕೆ ಎಲ್ಲಡೆ ವ್ಯಾಪಕ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com