ಕಂಗನಾ ರಣಾವತ್ ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ: ನವಾಬ್ ಮಲ್ಲಿಕ್ ಒತ್ತಾಯ

ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆಯಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಆಗ್ರಹಿಸಿದ್ದಾರೆ.
ಕಂಗನಾ ರಣಾವತ್
ಕಂಗನಾ ರಣಾವತ್

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆದು ಆಕೆಯನ್ನು ಬಂಧಿಸಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು,  ಹೇಳಿಕೆ ನೀಡುವ ಮುನ್ನ ಬಾಲಿವುಡ್ ನಟಿ ಭಾರೀ ಡ್ರಗ್ಸ್ ಸೇವಿಸಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ ಎಂದು ಹೇಳಿದ್ದಾರೆ. ಕಂಗನಾ ರಣಾವತ್ ಹೇಳಿಕೆಯನ್ನು ಖಂಡಿಸಿರುವ ನವಾಬ್ ಮಲ್ಲಿಕ್, '2014ರಲ್ಲಿ ಭಾರತಕ್ಕೆ ಸ್ವಾತಂತ್ರ್ಯ ಸಿಕ್ಕಿದೆ' ಎಂಬ ಕಂಗನಾ ರಣಾವತ್ ಹೇಳಿಕೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ. ನಟಿ ಸ್ವಾತಂತ್ರ್ಯ ಹೋರಾಟಗಾರರನ್ನು ಅವಮಾನಿಸಿದ್ದಾರೆ. ಕೇಂದ್ರ ಕಂಗನಾ ಅವರಿಂದ ಪದ್ಮಶ್ರೀಯನ್ನು ವಾಪಸ್ ಪಡೆದು ಅವರನ್ನು ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ.

ಸದಾ ಒಂದಲ್ಲಾ ಒಂದು ವಿವಾದಗಳಿಂದ ಸುದ್ದಿಯಾಗುವ ನಟಿ ಕಂಗನಾ ರಣಾವತ್ ಇತ್ತೀಚೆಗಷ್ಟೇ ಸಂದರ್ಶನವೊಂದರಲ್ಲಿ 1947ರಲ್ಲಿ ದೇಶಕ್ಕೆ ಸಿಕ್ಕಿದ್ದು ಸ್ವಾತಂತ್ರ್ಯ ಅಲ್ಲ, ಅದು ಭಿಕ್ಷೆ. 2014ರಲ್ಲಿ ದೇಶಕ್ಕೆ ನಿಜವಾದ ಸ್ವಾತಂತ್ರ್ಯ ಸಿಕ್ಕಿತು ಎಂದು ಪರೋಕ್ಷವಾಗಿ ನರೇಂದ್ರ ಮೋದಿ ಅವರ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸ್ವಾತಂತ್ರ್ಯ ಸಿಕ್ಕಿತು ಎಂದು ಹೇಳುವ ಮೂಲಕ ವಿವಾದಕ್ಕೆ ಸಿಲುಕಿದರು.

ಕಂಗನಾರ ಈ ಹೇಳಿಕೆಗೆ ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ಭಾರೀ ಆಕ್ಷೇಪ ವ್ಯಕ್ತವಾಗಿತ್ತು, ಇದಕ್ಕೂ ಮುನ್ನ ವರುಣ್ ಗಾಂಧಿಯಿಂದ ಹಿಡಿದು ಅನೇಕ ನಾಯಕರು ಕಂಗನಾ ರಣಾವತ್ ಅವರನ್ನು ಟೀಕಿಸಿದ್ದಾರೆ .

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com