ನ.14 ಪಂಡಿತ್ ಜವಹರಲಾಲ್ ನೆಹರೂ ಜನ್ಮಜಯಂತಿಯಂದು ಮಕ್ಕಳ ದಿನಾಚರಣೆ: ಪ್ರಧಾನಿ, ಸಿಎಂ ಸೇರಿ ಗಣ್ಯರ ಸ್ಮರಣೆ 

ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಲು ನವೆಂಬರ್ 14 ಅನ್ನು ಬಾಲ ದಿವಸ್ ಅಥವಾ ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ.
ಮಕ್ಕಳು ಮತ್ತು ಪಂಡಿತ್ ಜವಹರಲಾಲ್ ನೆಹರೂ ಅವರ ಸಂಗ್ರಹ ಚಿತ್ರ
ಮಕ್ಕಳು ಮತ್ತು ಪಂಡಿತ್ ಜವಹರಲಾಲ್ ನೆಹರೂ ಅವರ ಸಂಗ್ರಹ ಚಿತ್ರ

ನವದೆಹಲಿ/ಬೆಂಗಳೂರು: ದೇಶದ ಮೊದಲ ಪ್ರಧಾನಿ ಪಂಡಿತ್ ಜವಾಹರಲಾಲ್ ನೆಹರು ಅವರ ಜನ್ಮದಿನದಂದು ಅವರಿಗೆ ಗೌರವ ಸಲ್ಲಿಸಲು ನವೆಂಬರ್ 14 ಅನ್ನು ಬಾಲ ದಿವಸ್ ಅಥವಾ ಮಕ್ಕಳ ದಿನಾಚರಣೆ ಎಂದು ಆಚರಿಸಲಾಗುತ್ತದೆ.

1889 ರಲ್ಲಿ ಜನಿಸಿದ ಜವಹರಲಾಲ್ ನೆಹರೂ ಅವರನ್ನು ಮಕ್ಕಳು ಪ್ರೀತಿಯಿಂದ ಚಾಚಾ ನೆಹರು ಎಂದು ಕರೆಯುತ್ತಿದ್ದರು. ಮಕ್ಕಳ ಮೇಲೆ ಅವರಿಗೆ ವಿಶೇಷವಾದ ಪ್ರೀತಿ, ಕಾಳಜಿ. ಮಕ್ಕಳಿಗಾಗಿಯೇ ಸ್ಥಳೀಯ ಸಿನಿಮಾ ಮಾಡಲು ಮತ್ತು ಪ್ರತಿ ಮಕ್ಕಳ ಮನರಂಜನೆಯ ಹಕ್ಕನ್ನು ಉತ್ತೇಜಿಸಲು ನೆಹರು 1955 ರಲ್ಲಿ ಚಿಲ್ಡ್ರನ್ಸ್ ಫಿಲ್ಮ್ ಸೊಸೈಟಿ ಆಫ್ ಇಂಡಿಯಾವನ್ನು ಸ್ಥಾಪಿಸಿದರು.

ಮಕ್ಕಳ ಮೇಲಿನ ಅವರ ಪ್ರೀತಿಯ ಜೊತೆಗೆ, ರಾಷ್ಟ್ರವನ್ನು ನಿರ್ಮಿಸಲು ಅವರು ನೀಡಿದ ಕೊಡುಗೆಗಾಗಿ ನೆಹರೂ ಅವರನ್ನು ಗೌರವಿಸಲು ಅವರ ಜನ್ಮ ವಾರ್ಷಿಕೋತ್ಸವದ ದಿನವನ್ನು ಸಹ ಈ ದಿನ ಆಚರಿಸಲಾಗುತ್ತದೆ.

ದೇಶದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಇಂದು ನೆಹರೂ ಅವರನ್ನು ನೆನೆದಿದ್ದು ಅವರ ಜನ್ಮಜಯಂತಿಗೆ ಗೌರವ ನಮನ ಸಲ್ಲಿಸಿದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿಯವರು ನೆಹರೂ ಅವರನ್ನು ನೆನದು ಮಕ್ಕಳ ದಿನಾಚರಣೆಗೆ ಶುಭಕೋರಿದ್ದಾರೆ.

ದೇಶದ ಪ್ರಥಮ ಪ್ರಧಾನಮಂತ್ರಿ ಪಂಡಿತ್ ಜವಾಹರಲಾಲ್ ನೆಹರು ಅವರ ಜಯಂತಿಯಂದು ಅವರಿಗೆ ಗೌರವಪೂರ್ವಕ ಪ್ರಣಾಮಗಳು. ಅವರ ಸಂಸ್ಮರಣೆಗಳ ಜೊತೆಗೆ ನಾಡಿನ ಎಲ್ಲ ಮಕ್ಕಳಿಗೂ ಮಕ್ಕಳ ದಿನಾಚರಣೆಯ ಪ್ರೀತಿಪೂರ್ವಕ ಶುಭಕಾಮನೆಗಳು ಎಂದು ಹೇಳಿದ್ದಾರೆ.

ಸ್ವಾತಂತ್ರ್ಯ ಚಳವಳಿಯ ಮುಂಚೂಣಿ ನಾಯಕ, ಪ್ರಥಮ ಪ್ರಧಾನಮಂತ್ರಿ, ಭಾರತರತ್ನ ಪಂಡಿತ್ ಜವಾಹರ್ ಲಾಲ್ ನೆಹರು ಅವರ ಜಯಂತಿಯಂದು, ಅವರ ಸಂಸ್ಮರಣೆಗಳ ಜೊತೆಗೆ ಎಲ್ಲ ಮಕ್ಕಳಿಗೆ ಮಕ್ಕಳ ದಿನಾಚರಣೆಯ ಹಾರ್ದಿಕ ಶುಭಾಶಯಗಳು. ಇಂದಿನ ಮಕ್ಕಳೇ ಮುಂದಿನ ಪ್ರಜೆಗಳು. ಸದೃಢ, ಸಶಕ್ತ, ಸಮೃದ್ಧ ಭಾರತಕ್ಕಾಗಿ ಮಕ್ಕಳ ಸರ್ವತೋಮುಖ ಬೆಳವಣಿಗೆ ನಮ್ಮೆಲ್ಲರ ಹೊಣೆಗಾರಿಕೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಆಶಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com