ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 16 ರೂಪಾಯಿ ಇಳಿಕೆ, ಇದು ದೇಶದಲ್ಲೇ ಅತಿ ಹೆಚ್ಚು ಕಡಿತ
ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡಿದೆ.
Published: 14th November 2021 04:35 PM | Last Updated: 14th November 2021 04:35 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ಕಾಂಗ್ರೆಸ್ ಆಡಳಿತವಿರುವ ಪಂಜಾಬ್ ನಲ್ಲಿ ಸ್ಥಳೀಯ ಮಾರಾಟ ತೆರಿಗೆ ಅಥವಾ ವ್ಯಾಟ್ ಅನ್ನು ಕಡಿತಗೊಳಿಸಿದ ನಂತರ ಪೆಟ್ರೋಲ್ ಬೆಲೆ ದೇಶದಲ್ಲೇ ಅತಿ ಹೆಚ್ಚು ಇಳಿಕೆ ಕಂಡಿದೆ.
ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು ಲೀಟರ್‌ಗೆ 5 ರೂಪಾಯಿ ಮತ್ತು ಡೀಸೆಲ್ ಮೇಲೆ 10 ರೂಪಾಯಿ ಕಡಿಮೆ ಮಾಡಿದ ನಂತರ, 25 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಸಹ ವ್ಯಾಟ್ ಕಡಿಮೆ ಮಾಡಲುವ ಮೂಲಕ ಜನರಿಗೆ ಮತ್ತಷ್ಟು ರಿಲೀಫ್ ನೀಡಿವೆ.
ಇದನ್ನು ಓದಿ: ಗ್ರಾಹಕರ ಜೇಬಿಗೆ ಕತ್ತರಿ: ಪೆಟ್ರೋಲ್-ಡೀಸೆಲ್ ಬೆಲೆ ಸತತ ಏರಿಕೆ, ಇಂದಿನ ದರ ವಿವರ ಹೀಗಿದೆ
ಅಬಕಾರಿ ಸುಂಕ ಮತ್ತು ವ್ಯಾಟ್ ಕಡಿತದ ಸಂಯೋಜಿತ ಪರಿಣಾಮವಾಗಿ ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 16.02 ರೂಪಾಯಿ ಮತ್ತು ಡೀಸೆಲ್ ಬೆಲೆ 19.61 ರೂಪಾಯಿ ಕಡಿಮೆಯಾಗಿದೆ.
ಮುಂದಿನ ವರ್ಷ ವಿಧಾನಸಭೆ ಚುನಾವಣೆ ಎದುರಿಸಲಿರುವ ಪಂಜಾಬ್ ನಲ್ಲಿ ಪೆಟ್ರೋಲ್ ಬೆಲೆಯಲ್ಲಿ ಲೀಟರ್‌ಗೆ 16.02 ರೂಪಾಯಿ ಕಡಿತ ಮಾಡಲಾಗಿದೆ. ಕೇಂದ್ರಾಡಳಿತ ಪ್ರದೇಶ ಲಡಾಖ್‌ನಲ್ಲಿ ಲೀಟರ್‌ಗೆ 13.43 ರೂ. ಮತ್ತು ಕರ್ನಾಟಕ (ರೂ 13.35) ನಂತರದ ಸ್ಥಾನದಲ್ಲಿದೆ.