ಉತ್ತರ ಪ್ರದೇಶ ಚುನಾವಣೆ 2022: ಮತ್ತೆ ಬಿಜೆಪಿ ಅಧಿಕಾರಕ್ಕೆ?: ಚುನಾಣಾ ಪೂರ್ವ ಸಮೀಕ್ಷೆ ಅಂಕಿ-ಅಂಶ ಇಂತಿದೆ...

ದೇಶದ ಅತಿ ದೊಡ್ಡ ರಾದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ.
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ದೇಶದ ಅತಿ ದೊಡ್ಡ ರಾಜ್ಯ ಉತ್ತರ ಪ್ರದೇಶ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳು ಬಾಕಿ ಇದ್ದು ಚುನಾವಣಾ ಪೂರ್ವ ಸಮೀಕ್ಷೆಗಳು ನಡೆಯುತ್ತಿವೆ.

ಪ್ರಧಾನಿ ನರೇಂದ್ರ ಮೋದಿ ಸಿಎಂ ಯೋಗಿ ಆದಿತ್ಯನಾಥ್ ರ "ವಿಕಾಸ ಪಥ" ಜನಮನ ಗೆದ್ದಿದೆಯಾ ಎಂಬುದರ ಪರೀಕ್ಷೆಯೂ ಈ ಚುನಾವಣೆಯಾಗಿರಲಿದ್ದು, ಟೈಮ್ಸ್ ನೌ-ಪೋಲ್ ಸ್ಟಾರ್ಟ್ ಚುನಾವಣಾ ಪೂರ್ವ ಸಮೀಕ್ಷೆ ನಡೆದಿದ್ದು ಅಚ್ಚರಿಯ ಅಂಕಿ-ಅಂಶಗಳು ಹೊರಬಿದ್ದಿವೆ. 

403 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿ 239-245 ಸ್ಥಾನಗಳನ್ನು ಗೆಲ್ಲುವ ಮೂಲಕ ಸ್ಪಷ್ಟ ಬಹುಮತ ಪಡೆದು ಮತ್ತೆ ಅಧಿಕಾರಕ್ಕೆ ಬರಲಿದೆ ಎನ್ನುತ್ತಿದೆ ಟೈಮ್ಸ್ ನೌ ನಡೆಸಿರುವ ಚುನಾವಣಾ ಪೂರ್ವ ಸಮೀಕ್ಷೆ. 

ಇನ್ನು ಬಿಜೆಪಿಗೆ ಪ್ರತಿಸ್ಪರ್ಧಿಯಾಗಿರುವ ಅಖಿಲೇಶ್ ಯಾದವ್ ನೇತೃತ್ವದ ಸಮಾಜವಾದಿ ಪಕ್ಷ 119-125 ಸ್ಥಾನಗಳಿಗೆ ತೃಪ್ತಿಪಟ್ಟುಕೊಳ್ಳಬೇಕಾಗುತ್ತದೆ, ಬಿಎಸ್ ಪಿ 28-32 ಸ್ಥಾನಗಳಲ್ಲಿ ಮಾತ್ರ ತನ್ನ ಶಾಸಕರ ಪ್ರಾತಿನಿಧ್ಯದ ಅಸ್ತಿತ್ವ ಉಳಿಸಿಕೊಳ್ಳಲಿದೆ ಎಂದು ಟೈಮ್ಸ್ ನೌ ಸಮೀಕ್ಷೆ ಭವಿಷ್ಯ ನುಡಿದಿದೆ. ಇನ್ನು ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್ ನ ಪುನರುಜ್ಜೀವನಕ್ಕೆ ತಮ್ಮ ಶತಪ್ರಯತ್ನದ ನಡುವೆಯೂ ಪ್ರಿಯಾಂಕ ವಾಧ್ರ ರಾಜ್ಯದ ಜನಮನ ಗೆಲ್ಲುವುದರಲ್ಲಿ ವಿಫಲರಾಗಲಿದ್ದಾರೆ ಎಂದೂ ಸಮೀಕ್ಷೆ ಹೇಳಿದೆ. 

ಬುಂದೇಲ್ ಖಂಡ್ ಪ್ರಾಂತ್ಯದಲ್ಲಿ 19 ಸ್ಥಾನಗಳಿದ್ದು, ಬಿಜೆಪಿ 15-17 ಸ್ಥಾನಗಳನ್ನು ಗೆಲ್ಲಲಿದೆ. ಎಸ್ ಪಿ- 0-1 ಸ್ಥಾನಗಳನ್ನು ಗೆಲ್ಲುವ ಸಾಧ್ಯತೆ ಇದ್ದರೆ ಬಿಎಸ್ ಪಿ 2-5 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇದೆ, ಕಾಂಗ್ರೆಸ್ ಗೆ 1-2 ಸ್ಥಾನಗಳು ಸಿಗಬಹುದು. 

ದೋಬ್ ಪ್ರದೇಶದಲ್ಲಿ 71 ಸ್ಥಾನಗಳಿದ್ದು, ಬಿಜೆಪಿ ಇಲ್ಲೂ ಉತ್ತಮ ಸಾಧನೆ ಮಾಡುವ ಸಾಧ್ಯತೆಗಳಿವೆ. ಆಡಳಿತಾರೂಢ ಪಕ್ಷಕ್ಕೆ ಈ ಪ್ರದೇಶದಲ್ಲಿ 37-40 ಸ್ಥಾನಗಳು ಸಿಗುವುದಿದ್ದರೆ, ಸಮಾಜವಾದಿ ಪಕ್ಷ 26-28 ಸ್ಥಾನಗಳನ್ನು ಗೆಲ್ಲಲಿದ್ದು, ಬಿಎಸ್ ಪಿ 4-6 ಸ್ಥಾನಗಳಲ್ಲಿ ಕಾಂಗ್ರೆಸ್ 0-2 ಸ್ಥಾನಗಳಲ್ಲಿ ಗೆಲ್ಲು ಸಾಧ್ಯತೆಗಳಿವೆ. 

ಅಖಿಲೇಶ್ ಯಾದವ್ ಅವರು ಚುನಾವಣಾ ರ್ಯಾಲಿಯಲ್ಲಿ ಜಿನ್ನಾ ಪರ ಹೇಳಿಕೆ ನೀಡಿದ್ದಕ್ಕಿಂತಲೂ ಮುನ್ನ ಈ ಸಮೀಕ್ಷೆ ನಡೆದಿದ್ದು, ಈ ಹೇಳಿಕೆ ಬಳಿಕ ಅಖಿಲೇಶ್ ಯಾದವ್ ವಿರುದ್ಧದ ಅಭಿಪ್ರಾಯ ಸೃಷ್ಟಿಯಾಗಿದ್ದು, ಪರಿಣಾಮಗಳು ಮತ್ತಷ್ಟು ನಾಟಕೀಯವಾಗಿ ಬದಲಾಗಬಹುದು ಎಂದು ಚುನಾವಣಾ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ. 92 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಪೂರ್ವಾಂಚಲದಲ್ಲಿ ಬಿಜೆಪಿ 47-50 ಕ್ಷೇತ್ರದಲ್ಲಿ ಗೆದ್ದರೆ, ಎಸ್ ಪಿ 31-35 ಕ್ಷೇತ್ರಗಳಲ್ಲಿ ಗೆಲ್ಲುವ ಸಾಧ್ಯತೆ ಇದೆ. 

ಪಶ್ಚಿಮ ಉತ್ತರ ಪ್ರದೇಶದಲ್ಲಿ ಬಿಜೆಪಿ 40-42 ಸ್ಥಾನಗಳನ್ನು ಎಸ್ ಪಿ 21-24 ಸ್ಥಾನಗಳನ್ನು, ಬಿಎಸ್ ಪಿ 2-3 ಸ್ಥಾನ ಗಳಲ್ಲಿ ಗೆಲುವು ಸಾಧಿಸಲಿದೆ ಎನ್ನುತ್ತಿದೆ ಟೈಮ್ಸ್ ನೌ ಸಮೀಕ್ಷೆ. 

2017 ರಲ್ಲಿ ಬಿಜೆಪಿ 403 ವಿಧಾನಸಭಾ ಕ್ಷೇತ್ರಗಳ ಪೈಕಿ 312 ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಬಹುಮತ ಪಡೆದಿತ್ತು. ಸಿಎಂ ಯೋಗಿ ಆದಿತ್ಯನಾಥ್ ಅವರು ಈಗ ಅವಧಿಯನ್ನು ಪೂರ್ಣಗೊಳಿಸುತ್ತಿದ್ದಾರೆ. 2017 ರ ಚುನಾವಣೆಯಲ್ಲಿ ಬಿಜೆಪಿ ಶೇ.40 ರಷ್ಟು ಮತಗಳನ್ನು ಪಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com