ಮಹಾರಾಷ್ಟ್ರ: ಭಿವಂಡಿಯಲ್ಲಿ ಅಕ್ರಮವಾಗಿ ತಂಗಿದ್ದ ಒಂಬತ್ತು ಬಾಂಗ್ಲಾದೇಶಿ ಪ್ರಜೆಗಳ ಬಂಧನ

ಯಾವುದೇ ಸೂಕ್ತ ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ 9 ಬಾಂಗ್ಲಾದೇಶಿ ಪ್ರಜೆಗಳನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಥಾಣೆ: ಯಾವುದೇ ಸೂಕ್ತ ದಾಖಲೆಗಳಿಲ್ಲದೆ ದೇಶದಲ್ಲಿ ಅಕ್ರಮವಾಗಿ ವಾಸಿಸುತ್ತಿದ್ದ ಆರೋಪದ ಮೇಲೆ 9 ಬಾಂಗ್ಲಾದೇಶಿ ಪ್ರಜೆಗಳನ್ನು ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ಬಂಧಿಸಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.

ಸಾರಾವಳಿ ಕೈಗಾರಿಕಾ ಎಸ್ಟೇಟ್‌ನ ಜವಳಿ ಘಟಕದಲ್ಲಿ ಉದ್ಯೋಗಿಯಾಗಿದ್ದ ಆರೋಪಿಗಳ ವಿರುದ್ಧ ಭಾರತೀಯ ಪಾಸ್‌ಪೋರ್ಟ್ ಕಾಯ್ದೆ ಮತ್ತು ವಿದೇಶಿ ಪ್ರಜೆಗಳ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಕೊಂಗಾವ್ ಪೊಲೀಸ್ ಠಾಣೆಯ ಠಾಣಾಧಿಕಾರಿ ಹೇಳಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ಗುರುವಾರ ತಡರಾತ್ರಿ ಸಾರಾವಳಿ ಕೈಗಾರಿಕಾ ವಸಾಹತು ಪ್ರದೇಶದಲ್ಲಿ ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರನ್ನು ಸಲೀಂ ಅಮೀನ್ ಶೇಖ್(30), ರಸಲ್ ಅಬುಲ್ ಹಸನ್ ಶೇಖ್ (27), ಮೊಹಮ್ಮದ್ ಶೇನ್ ಮೊಹಮ್ಮದ್ ಅಕ್ಬರಲೈ ಶೇಖ್(24), ಮೊಹಮ್ಮದ್ ಮಸೂಮ್ ಶೀದುಲ್ಲಾ ಇಸ್ಲಾಂ(21), ತರುಣ್ಮಣಿರಾಮ್ ತ್ರಿಪುರ (21), ಸುಮನ್ ಮಣಿರಾಮ್ ತ್ರಿಬುಪ್ರಾ (25), ಇಸ್ಮಾಯಿಲ್ ಅಬು ತಾಹಿರ್ ಖಾನ್ (19), ಅಜಮ್ ಯೂಸುಫ್ ಖಾನ್ (19) ಮತ್ತು ಮೊಹಮ್ಮದ್ ಅಮೀರ್ ಅಬು ಸೂಫಿಯಾ ಖಾನ್ (26) ಎಂದು ಗುರುತಿಸಲಾಗಿದೆ.

ಎರಡು ದಿನಗಳ ಹಿಂದೆ ಇದೇ ರೀತಿ ಎಂಬಿವಿವಿ ಪೊಲೀಸರು ಭಾಯಂದರ್‌ನ ಗೋವಿಂದ್ ನಗರ ಪ್ರದೇಶದಲ್ಲಿ ಒಂಬತ್ತು ಬಾಂಗ್ಲಾದೇಶಿ ಪ್ರಜೆಗಳನ್ನು ಬಂಧಿಸಿದ್ದರು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅವರ ವಿರುದ್ಧ ನಯಾ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com