ತಮಿಳುನಾಡು: ನಿರಂತರ ಮಳೆಗೆ ಕುಸಿದ ಮನೆ, 9 ಮಂದಿ ಸಾವು

ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದುಬಿದ್ದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನ ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.
ಮಳೆಗೆ ಕುಸಿದ ಮನೆ
ಮಳೆಗೆ ಕುಸಿದ ಮನೆ

ಚೆನ್ನೈ: ತಮಿಳುನಾಡಿನ ವೆಲ್ಲೂರು ಜಿಲ್ಲೆಯಲ್ಲಿ ಭಾರೀ ಮಳೆಗೆ ಮನೆ ಕುಸಿದ ಪರಿಣಾಮ ನಾಲ್ಕು ಮಕ್ಕಳು ಸೇರಿದಂತೆ ಒಂಬತ್ತು ಜನರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಅಗ್ನಿಶಾಮಕ, ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ಸ್ಥಳಕ್ಕೆ ಧಾವಿಸಿ ಗಾಯಗೊಂಡವರನ್ನು ಹೊರತೆಗೆದರು. ಮೃತರಲ್ಲಿ ನಾಲ್ವರು ಮಹಿಳೆಯರು, ನಾಲ್ವರು ಮಕ್ಕಳು ಹಾಗೂ ವ್ಯಕ್ತಿಯೊಬ್ಬರು ಎಂದು ಗುರುತಿಸಲಾಗಿದೆ. ಗಾಯಗೊಂಡ 8 ಜನರನ್ನು ಹೆಚ್ಚಿನ ಚಿಕಿತ್ಸೆಗಾಗಿ ಪೆರ್ನಂಬಟ್ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಘಟನೆಯಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ನೀಡುವುದಾಗಿ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಘೋಷಿಸಿದ್ದಾರೆ. ಕಳೆದ ವಾರ ಸುರಿದ ಭಾರೀ ಮಳೆಗೆ ರಾಜ್ಯದ ರಾಜಧಾನಿ ಚೆನ್ನೈ ಕೂಡ ಜಲಾವೃತವಾಗಿತ್ತು.

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ಇಂದು ಮುಂಜಾನೆ ತಮಿಳುನಾಡು ಮತ್ತು ಆಂಧ್ರಪ್ರದೇಶದ ನಡುವೆ ಕರಾವಳಿಯನ್ನು ದಾಟಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ಮತ್ತು ಮಳೆ ಕ್ರಮೇಣ ದುರ್ಬಲಗೊಳ್ಳಲಿದೆ ಎಂದು ಹೇಳಿದೆ.

ಆದ್ರೂ ಹವಾಮಾನ ಇಲಾಖೆ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com