ಪೂಂಚ್‌: ಡ್ರೋನ್‌ ಮಾದರಿಯ ವಸ್ತು ಪತ್ತೆ, ಶೋಧಕಾರ್ಯ ಆರಂಭ

ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಡ್ರೋನ್ ತರಹದ ವಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿವೆ.
ಡ್ರೋನ್
ಡ್ರೋನ್

ಜಮ್ಮು: ಜಮ್ಮು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಡ್ರೋನ್ ತರಹದ ವಸ್ತು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ತೀವ್ರ ನಿಗಾ ವಹಿಸಿವೆ. ಮೆಂಧಾರ್ ಗ್ರಾಮದ ಸ್ಥಳೀಯರು ಸಂಜೆ ಶಂಕಿತ ಹಾರುವ ವಸ್ತುವಿನ ಬಗ್ಗೆ ವರದಿ ಮಾಡಿದ ನಂತರ ಪೊಲೀಸ್ ಮತ್ತು ಸೇನಾ ತಂಡಗಳನ್ನು ಅಲರ್ಟ್ ಮಾಡಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಕೆಲ ದಿನಗಳ ಹಿಂದಷ್ಟೇ ಡ್ರೋನ್‌ನಿಂದ ಶಸ್ತ್ರಾಸ್ತ್ರಗಳನ್ನು ಬೀಳಿಸಿದ ನಂತರವೂ ಶೋಧ ಕಾರ್ಯಾಚರಣೆ ನಡೆಸಲಾಗಿತ್ತು. ಗಡಿ ನಿಯಂತ್ರಣ ರೇಖೆಯಾದ್ಯಂತ ಇಂತಹ ಘಟನೆಯ ಯಾವುದೇ ಸಾಧ್ಯತೆಯನ್ನು ತಳ್ಳಿಹಾಕಲು, ಶೋಧ ಕಾರ್ಯಾಚರಣೆಯನ್ನು ನಡೆಸಲಾಗುತ್ತಿದೆ. ಭದ್ರತೆಯನ್ನೂ ಹೆಚ್ಚಿಸಲಾಗಿದೆ.

ಶಂಕಿತ ಭಯೋತ್ಪಾದಕರ ಚಲನವಲನಗಳ ಬಗ್ಗೆ ಮಾಹಿತಿ ಆಧರಿಸಿ ಗುರುವಾರ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು ಎಂದು ತಿಳಿದುಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com