ಆನ್‌ಲೈನ್ ಗಾಂಜಾ ಮಾರಾಟ ಪ್ರಕರಣ: ಅಮೆಜಾನ್ ಇಂಡಿಯಾ ಅಧಿಕಾರಿಗಳ ವಿರುದ್ಧ ಎಫ್‌ಐಆರ್
ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಆನ್‌ಲೈನ್ ಗಾಂಜಾ ಮಾರಾಟ ದಂಧೆಯನ್ನು ಭೇದಿಸಿದ ನಂತರ ಅಮೆಜಾನ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
Published: 21st November 2021 12:11 AM | Last Updated: 21st November 2021 12:11 AM | A+A A-

ಅಮೆಜಾನ್
ನವದೆಹಲಿ: ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಆನ್‌ಲೈನ್ ಗಾಂಜಾ ಮಾರಾಟ ದಂಧೆಯನ್ನು ಭೇದಿಸಿದ ನಂತರ ಅಮೆಜಾನ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ದೇಶದಲ್ಲಿ ಎಎಸ್‌ಎಸ್‌ಎಲ್ ಆಗಿ ಕಾರ್ಯನಿರ್ವಹಿಸುತ್ತಿರುವ ಅಮೆಜಾನ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರ ವಿರುದ್ಧ ನಾರ್ಕೋಟಿಕ್ ಡ್ರಗ್ಸ್ ಮತ್ತು ಸೈಕೋಟ್ರೋಪಿಕ್ ಸಬ್‌ಸ್ಟೆನ್ಸ್(ಎನ್‌ಡಿಪಿಎಸ್) ಕಾಯ್ದೆಯ ಸೆಕ್ಷನ್ 38ರ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಭಿಂಡ್ ಪೊಲೀಸ್ ಅಧೀಕ್ಷಕ ಮನೋಜ್ ಕುಮಾರ್ ಸಿಂಗ್ ಹೇಳಿದ್ದಾರೆ.
ಎನ್‌ಡಿಪಿಎಸ್ ಕಾಯ್ದೆಯಲ್ಲಿ ಪ್ರಕರಣ
ಎಫ್‌ಐಆರ್‌ನಲ್ಲಿ ಯಾವುದೇ ನಿರ್ದಿಷ್ಟ ವ್ಯಕ್ತಿಯ ಹೆಸರಿಲ್ಲ ಎಂದು ಹೇಳಿದರು. ನವೆಂಬರ್ 13ರಂದು ಗ್ವಾಲಿಯರ್ ನಿವಾಸಿಗಳಾದ ಬಿಜೇಂದ್ರ ತೋಮರ್ ಮತ್ತು ಸೂರಜ್ ಅಲಿಯಾಸ್ ಕಲ್ಲು ಪಾವಯ್ಯ ಅವರಿಂದ 21.7 ಕೆಜಿ ಗಾಂಜಾ ವಶಪಡಿಸಿಕೊಂಡ ನಂತರ ಜಿಲ್ಲೆಯ ಗೋಹಾಡ್ ಪೊಲೀಸ್ ಠಾಣೆಯಲ್ಲಿ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ಎಸ್‌ಪಿ ಹೇಳಿದರು.
ಸಿಎಟಿ ಆಗ್ರಹ
ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ(ಸಿಎಟಿ), ಈ ಗಂಭೀರ ವಿಷಯದ ಬಗ್ಗೆ ಕೇಂದ್ರ ಸರ್ಕಾರದಿಂದ ತಕ್ಷಣದ ಕ್ರಮಕ್ಕೆ ಒತ್ತಾಯಿಸಿ, ಮಾರಾಟಗಾರನಂತೆ ವರ್ತಿಸಿದ ಅಮೆಜಾನ್ ವಿರುದ್ಧ ಮಾದಕ ದ್ರವ್ಯ ನಿಯಂತ್ರಣ ಬ್ಯೂರೋ(ಎನ್‌ಸಿಬಿ) ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದೆ. ಹಣ ಸಂಗ್ರಹಿಸಿ, ಅವರ ವೆಬ್‌ಸೈಟ್‌ನಲ್ಲಿ ಪೋಸ್ಟ್ ಮಾಡಿ, ಕಮಿಷನ್ ಗಳಿಸಿದ್ದಾರೆ ಮತ್ತು ಆರ್ಯನ್ ಖಾನ್ ವಿರುದ್ಧ ಹೊರಿಸಲಾದ ಆರೋಪಗಳಿಗಿಂತ ಗಂಭೀರವಾದ ಕೆಲಸವನ್ನು ಮಾಡಿದ್ದಾರೆ. ಇದಕ್ಕಾಗಿ ಅವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು.
ಅಕ್ರಮ ಹಣ ವರ್ಗಾವಣೆ ಆರೋಪ
ಈ ಅಕ್ರಮಕ್ಕಾಗಿ ಅಮೆಜಾನ್ ಮತ್ತು ಅದರ ಉನ್ನತ ನಿರ್ವಹಣೆಯ ವಿರುದ್ಧ ತಕ್ಷಣವೇ ಕ್ರಮ ಕೈಗೊಳ್ಳಲು ಮತ್ತು ಕ್ರಿಮಿನಲ್ ಕ್ರಮವನ್ನು ಪ್ರಾರಂಭಿಸಲು NCB ಸೇರಿದಂತೆ ಸರ್ಕಾರ ಮತ್ತು ಕಾನೂನು ಜಾರಿ ಸಂಸ್ಥೆಗಳನ್ನು ಖಂಡೇಲ್ವಾಲ್ ಒತ್ತಾಯಿಸಿದ್ದಾರೆ. ಅವರ ಪೋರ್ಟಲ್ ಮೂಲಕ ಗಾಂಜಾವನ್ನು ಮಾರಾಟ ಮಾಡಲು ಸಾಧ್ಯವಾದರೆ. ಅಕ್ರಮ ಶಸ್ತ್ರಾಸ್ತ್ರ ಪೂರೈಕೆ ಅಥವಾ ಇತರ ದೇಶವಿರೋಧಿ ಚಟುವಟಿಕೆಗಳ ವ್ಯಾಪಾರ ಮತ್ತು ಮನಿ ಲಾಂಡರಿಂಗ್ ಅವರ ಪೋರ್ಟಲ್‌ನಲ್ಲಿ ಕಾರ್ಯನಿರ್ವಹಿಸುವ ದಿನ ದೂರವಿಲ್ಲ.
ದಾಖಲಾದ ಪ್ರಕರಣದ ಪ್ರಕಾರ, ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮೂಲಕ ಸಿಹಿತಿಂಡಿ ಮಾರಾಟ ಮಾಡುವ ನೆಪದಲ್ಲಿ ಗಾಂಜಾವನ್ನು ಮಾರಾಟ ಮಾಡಲಾಗುತ್ತಿತ್ತು. ಅಮೆಜಾನ್ ತನ್ನ ಪ್ಲಾಟ್‌ಫಾರ್ಮ್ ಮೂಲಕ ಅಕ್ರಮ ಉತ್ಪನ್ನಗಳ ಮಾರಾಟವನ್ನು ಅನುಮತಿಸುವುದಿಲ್ಲ ಮತ್ತು ಈ ವಿಷಯದ ತನಿಖೆಗೆ ಸಹಕರಿಸುತ್ತಿದೆ ಎಂದು ಈ ಹಿಂದೆ ಹೇಳಿಕೆಯಲ್ಲಿ ತಿಳಿಸಿತ್ತು.