ಬಾಲಾಕೋಟ್ ಹಿರೋ ಅಭಿನಂದನ್ ವರ್ಧಮಾನ್ ಗೆ ಇಂದು ವೀರ ಚಕ್ರ ಪ್ರದಾನ

ಬಾಲಾಕೋಟ್ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಂತರದ ಘಟನೆಯಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ನ.22 ರಂದು ವೀರ ಚಕ್ರ ಪಶಸ್ತಿ ಪ್ರದಾನ ಮಾಡಲಾಗುತ್ತದೆ. 
ವಿಂಗ್ ಕಮಾಂಡರ್ ಅಭಿನಂದನ್  ವರ್ತಮಾನ್
ವಿಂಗ್ ಕಮಾಂಡರ್ ಅಭಿನಂದನ್ ವರ್ತಮಾನ್

ನವದೆಹಲಿ: ಬಾಲಾಕೋಟ್ ವೈಮಾನಿಕ ಸರ್ಜಿಕಲ್ ಸ್ಟ್ರೈಕ್ ನಂತರದ ಘಟನೆಯಲ್ಲಿ ಪಾಕಿಸ್ತಾನಕ್ಕೆ ನಡುಕ ಹುಟ್ಟಿಸಿದ ಗ್ರೂಪ್ ಕ್ಯಾಪ್ಟನ್ ಅಭಿನಂದನ್ ವರ್ಧಮಾನ್ ಗೆ ನ.22 ರಂದು ವೀರ ಚಕ್ರ ಪಶಸ್ತಿ ಪ್ರದಾನ ಮಾಡಲಾಗುತ್ತದೆ. 

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ನಡೆಯಲಿರುವ ಸಮಾರಂಭದಲ್ಲಿ ಅಭಿನಂದನ್ ಅವರಿಗೆ ವೀರ ಚಕ್ರ ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ. 

ಪುಲ್ವಾಮ ಉಗ್ರ ದಾಳಿಗೆ ಪ್ರತೀಕಾರವಾಗಿ ಬಾಲಾಕೋಟ್ ನಲ್ಲಿ ಭಾರತ ನಡೆಸಿದ್ದ ವೈಮಾನಿಕ ದಾಳಿಗೆ ಪ್ರತಿಯಾಗಿ ಪಾಕ್ ನಡೆಸಿದ ದಾಳಿಯ ವೇಳೆ ಫೆ.27, 2019 ರಲ್ಲಿ ಪಾಕಿಸ್ತಾನದ ಎಫ್-16 ಫೈಟರ್ ಜೆಟ್ ನ್ನು ಹೊಡೆದುರುಳಿಸಿ, ಸಂಘರ್ಷದ ಪರಿಸ್ಥಿತಿಯಲ್ಲಿ ಶೌರ್ಯದಿಂದ ಹೋರಾಡಿದ್ದಕ್ಕಾಗಿ ಅಭಿನಂದನ್ ಅವರನ್ನು ಗೌರವಿಸಲಾಗುತ್ತಿದೆ.  

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com