ಪಠಾಣ್ಕೋಟ್ ಸೇನಾ ಗೇಟ್ ಬಳಿ ಗ್ರೆನೇಡ್ ಸ್ಫೋಟ: ಎಲ್ಲಾ ಚೆಕ್ ಪೋಸ್ಟ್'ಗಳಲ್ಲೂ ಹೈ ಅಲರ್ಟ್ ಘೋಷಣೆ
ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
Published: 22nd November 2021 08:13 AM | Last Updated: 22nd November 2021 08:13 AM | A+A A-

ಸ್ಫೋಟ ಸಂಭವಿಸಿದ ಸ್ಥಳದಲ್ಲಿರುವ ಪೊಲೀಸರು, ಭದ್ರತಾ ಸಿಬ್ಬಂದಿಗಳು.
ಪಂಜಾಬ್: ಪಠಾಣ್‌ಕೋಟ್‌ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್‌ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ, ಸ್ಫೋಟ ಸಂಭವಿಸಿರುವ ಸ್ಥಳದಲ್ಲಿ ಮದುವೆ ಮೆರವಣಿಗೆ ಸಾಗುತ್ತಿದ್ದಾಗ ಬೈಕ್‌ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಗೇಟ್ ಬಳಿ ಗ್ರೆನೇಡ್ ಎಸೆದು ಪರಾರಿಯಾಗಿದ್ದಾರೆಂದು ತಿಳಿದುಬಂದಿದೆ.
ಘಟನೆ ಬಳಿಕ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳದಲ್ಲಿರುವ ಎಲ್ಲಾ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಈ ನಡುವೆ ಪಠಾಣ್‌ಕೋಟ್‌ನ ಎಲ್ಲಾ ಪೊಲೀಸ್ ಚೆಕ್‌ಪೋಸ್ಟ್‌ಗಳ್ಲಿಯೂ ಹೈ ಅಲರ್ಟ್ ಘೋಷಣೆ ಮಾಡಲಾಗಿದೆ.
ಘಟನೆಯಲ್ಲಿ ಯಾವುದೇ ಗಾಯಗಳು ವರದಿಯಾಗಿಲ್ಲ. ಸ್ಥಳಕ್ಕೆ ಧಾವಿಸಿರುವ ಪೊಲೀಸ್ ಅಧಿಕಾರಿಗಳು ಸ್ಥಳದಲ್ಲಿದ್ದ ಗ್ರೆನೇಡ್‌ನ ಭಾಗಗಳನ್ನು ವಶಪಡಿಸಿಕೊಂಡಿದ್ದಾರೆಂದು ವರದಿಗಳು ತಿಳಿಸಿವೆ.