ಸಂಸತ್ ಅಧಿವೇಶನಕ್ಕೆ ರಣತಂತ್ರ; ನವೆಂಬರ್ 25 ರಂದು ಕಾಂಗ್ರೆಸ್ ಸಂಸದೀಯ ಸಭೆ

ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ಸೋಮವಾರದಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನವೆಂಬರ್ 25ರಂದು ಸಂಸದೀಯ ಸಭೆ ಸೇರಲು ನಿರ್ಧರಿಸಿದೆ.
ಕಾಂಗ್ರೆಸ್ ಸಭೆಯಲ್ಲಿ ಸೋನಿಯಾ
ಕಾಂಗ್ರೆಸ್ ಸಭೆಯಲ್ಲಿ ಸೋನಿಯಾ

ನವದೆಹಲಿ: ಮುಂಬರುವ ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ಸೋಮವಾರದಿಂದ ಆರಂಭಗೊಳ್ಳಲಿದ್ದು, ಈ ಹಿನ್ನೆಲೆಯಲ್ಲಿ ಕಾರ್ಯತಂತ್ರ ರೂಪಿಸಲು ಕಾಂಗ್ರೆಸ್ ನವೆಂಬರ್ 25ರಂದು ಸಂಸದೀಯ ಸಭೆ ಸೇರಲು ನಿರ್ಧರಿಸಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ಈ ಬಾರಿ ಸಂಸತ್ತಿನಲ್ಲಿ ಹಲವು ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಲಿದ್ದೇವೆ. ಅದರಲ್ಲಿ ಹಣದುಬ್ಬರ ಪ್ರಮುಖ ಅಜೆಂಡ್ ಆಗಿರಲಿದೆ ಅಂತಾ ತಿಳಿಸಿದ್ದಾರೆ. ಮುಂಬರುವ ಸಂಸತ್ ಅಧಿವೇಶನದ ಕಾರ್ಯತಂತ್ರವನ್ನು ಅಂತಿಮಗೊಳಿಸಲು ಕಾಂಗ್ರೆಸ್ ಸಂಸದೀಯ ಪ್ರಮುಖರ ಸಭೆ ಕರೆದಿದ್ದೇವೆ. ನವೆಂಬರ್ 25ರಂದು ನವದೆಹಲಿಯಲ್ಲಿ ಈ ಸಭೆ ನಡೆಯಲಿದ್ದು, ಕೇಂದ್ರ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಹಲವು ವಿಚಾರಗಳನ್ನು ಚರ್ಚೆಗೆ ತೆಗೆದುಕೊಳ್ಳಲು ನಿರ್ಧರಿಸಲಾಗುತ್ತದೆ ಅಂತಾ ವೇಣುಗೋಪಾಲ್ ಹೇಳಿದ್ದಾರೆ.

ಈ ಮಧ್ಯೆ, ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೂ ಮುನ್ನ ಕೇಂದ್ರವು ನವೆಂಬರ್ 28 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಈ ಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇನ್ನು ಈಗಾಗಲೇ ಕೇಂದ್ರ ಸರ್ಕಾರ ತನ್ನ ವಿವಾದಿತ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದು, ಈ ಸಂಬಂಧ ಸಂಸತ್ ಅಧಿವೇಶನದಲ್ಲಿ ಕಾವೇರಿದ ಚರ್ಚೆಯಾಗುವ ಸಾಧ್ಯತೆಗಳಿವೆ. 

ಏತನ್ಮಧ್ಯೆ, ಸಂಸತ್ತಿನ ಚಳಿಗಾಲದ ಅಧಿವೇಶನಕ್ಕೆ ಮುಂಚಿತವಾಗಿ ಕೇಂದ್ರವು ನವೆಂಬರ್ 28 ರಂದು ಸರ್ವಪಕ್ಷ ಸಭೆಯನ್ನು ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಕೂಡ ಸಭೆಯಲ್ಲಿ ಪಾಲ್ಗೊಳ್ಳಬಹುದು ಎಂದು ಮೂಲಗಳು ತಿಳಿಸಿವೆ.

ಸಂಸತ್ತಿನ ಚಳಿಗಾಲದ ಅಧಿವೇಶನ ನವೆಂಬರ್ 29 ರಿಂದ ಪ್ರಾರಂಭವಾಗಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com