ಗುಜರಾತ್‌: ಇನ್‌ಸ್ಟಾಗ್ರಾಮ್‌ಗಾಗಿ ರೈಲಿನ ಮೇಲೆ ವೀಡಿಯೊ ಶೂಟ್ ಮಾಡಲು ಹೋಗಿ ಪ್ರಾಣ ಕಳೆದಕೊಂಡ ಬಾಲಕ

ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ಗಾಗಿ ವಿಡಿಯೋ ರೆಕಾರ್ಡ್ ಮಾಡಲು ರೈಲಿನ ವ್ಯಾಗನ್‌ಗೆ ಹತ್ತಿದ ಶಾಲಾ ಬಾಲಕನೊಬ್ಬ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಅಹಮದಾಬಾದ್: ಸಾಮಾಜಿಕ ಮಾಧ್ಯಮ ಇನ್‌ಸ್ಟಾಗ್ರಾಮ್‌ಗಾಗಿ ವಿಡಿಯೋ ರೆಕಾರ್ಡ್ ಮಾಡಲು ರೈಲಿನ ವ್ಯಾಗನ್‌ಗೆ ಹತ್ತಿದ ಶಾಲಾ ಬಾಲಕನೊಬ್ಬ ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿದ ಘಟನೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ನಡೆದಿದೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.

ಮೃತ ಬಾಲಕ ಪ್ರೇಮ್ ಪನ್‌ಕಾಲ್(15) ಸೋಮವಾರ ಸಂಜೆ ಸಬರಮತಿ ಯಾರ್ಡ್‌ನಲ್ಲಿ ನಿಂತಿದ್ದ ಗೂಡ್ಸ್ ರೈಲಿನ ವ್ಯಾಗನ್‌ ಹತ್ತಿದ್ದು, ಈ ವೇಳೆ ಮೇಲಿರುವ ಹೈ ವೋಲ್ಟೇಜ್ ವಿದ್ಯುತ್ ತಂತಿ ತಗುಲಿದೆ ಎಂದು ರೈಲ್ವೆ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಬಾಲಕ ಇಲ್ಲಿನ ರಾನಿಪ್ ಪ್ರದೇಶದ ತನ್ನ ಸ್ನೇಹಿತನೊಂದಿಗೆ ಇಲ್ಲಿಗೆ ಬಂದಿದ್ದರು. ವಿದ್ಯುತ್ ಸ್ಪರ್ಶದ ಪರಿಣಾಮ ತಕ್ಷಣ ಅವರು ನೆಲಕ್ಕೆ ಹಾರಿ ಸಾವನ್ನಪ್ಪಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಪಾಂಚಾಲ್ ತನ್ನ ಮೊಬೈಲ್ ಫೋನ್‌ನಲ್ಲಿ ಇನ್‌ಸ್ಟಾಗ್ರಾಮ್‌ಗಾಗಿ ವೀಡಿಯೊ ಶೂಟ್ ಮಾಡಲು ವ್ಯಾಗನ್‌ನ ಛಾವಣಿಯ ಮೇಲೆ ಹತ್ತಿದ್ದ ಎಂದು ಬಾಲಕನ ಸ್ನೇಹಿತ ಹೇಳಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಈ ಸಂಬಂಧ ಆಕಸ್ಮಿಕ ಸಾವು ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದ್ದು, ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿ ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com