ದೆಹಲಿ: ಮಹಿಳೆ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ ಅಪ್ರಾಪ್ತ ಬಾಲಕನ ಬಂಧನ

ದೆಹಲಿಯ ದ್ವಾರಕಾದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೆಹಲಿಯ ದ್ವಾರಕಾದಲ್ಲಿ ಮಹಿಳೆಯೊಬ್ಬರ ಮೇಲೆ ಅತ್ಯಾಚಾರವೆಸಗಿ, ಬಳಿಕ ಹತ್ಯೆ ಮಾಡಿದ ಆರೋಪದ ಮೇಲೆ 17 ವರ್ಷದ ಬಾಲಕನನ್ನು ದೆಹಲಿ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.

ನವೆಂಬರ್ 15 ರಂದು ದೆಹಲಿ ಪೊಲೀಸರಿಗೆ ಕಸದ ಬಳಿಯ ಚರಂಡಿಯಲ್ಲಿ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ತನಿಖೆ ನಡೆಸಿದ ಪೊಲೀಸರು ನವೆಂಬರ್ 17 ರಂದು ಕೊಲೆ ಆರೋಪದ ಮೇಲೆ ಆರೋಪಿಯನ್ನು ಬಂಧಿಸಿದ್ದರು. ನಂತರ ವಿಚಾರಣೆಯ ವೇಳೆ ಆರೋಪಿಯು ಅತ್ಯಾಚಾರ ಎಸಗಿರುವುದಾಗಿ ಪೊಲೀಸರಿಗೆ ತಿಳಿಸಿದ್ದಾನೆ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ನಂತರ ಆರೋಪಿ ಸಿಕ್ಕಿಬೀಳುವ ಭಯದಿಂದ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ಆಕೆಯ ಖಾಸಗಿ ಭಾಗಗಳಿಗೆ ಬೆಂಕಿ ಹಚ್ಚಿ ಸಾಕ್ಷ್ಯ ನಾಶಪಡಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com