ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತ, ಮುಂದಿನ ಐದು ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ
ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ.
Published: 24th November 2021 03:43 PM | Last Updated: 24th November 2021 03:44 PM | A+A A-

ಸಾಂದರ್ಭಿಕ ಚಿತ್ರ
ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಬುಧವಾರ ತಿಳಿಸಿದೆ. ಅಲ್ಲದೆ ಮುಂದಿನ ಐದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ.
ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನು ಓದಿ: ಅವ್ಯಾಹತ ಮಳೆಯಿಂದ ಬೆಂಗಳೂರಿನ ಹಲವು ಪ್ರದೇಶಗಳಿಗೆ ಹಾನಿ: ಬಿಬಿಎಂಪಿ ಎಂಜಿನಿಯರ್ ಗಳೊಂದಿಗೆ ಸಿಎಂ ಬೊಮ್ಮಾಯಿ ಇಂದು ಸಭೆ, ಚರ್ಚೆ
"ಇದರ ಪ್ರಭಾವದಿಂದ ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ" ಎಂದು ಹವಾಮಾನ ಇಲಾಖೆ ಹೇಳಿದೆ.
ಮುಂದಿನ ಐದು ದಿನಗಳಲ್ಲಿ ಆಂಧ್ರಪ್ರದೇಶದ ಕರಾವಳಿ, ಯಾನಂ, ರಾಯಲಸೀಮಾ, ಕರ್ನಾಟಕದ ದಕ್ಷಿಣ ಒಳನಾಡು, ಕೇರಳ, ಮಾಹೆ ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಐಎಂಡಿ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆಯಲಿದ್ದು, ಇನ್ನೂ ಐದು ದಿನ ಕೆಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ.