ದೆಹಲಿಯಲ್ಲಿ ನವೆಂಬರ್ 29 ರಿಂದ ಶಾಲಾ-ಕಾಲೇಜುಗಳು ಪುನರಾರಂಭ: ಪರಿಸರ ಸಚಿವ ಗೋಪಾಲ್ ರೈ
ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ...
Published: 24th November 2021 02:58 PM | Last Updated: 24th November 2021 02:58 PM | A+A A-

ದೆಹಲಿ ಪರಿಸರ ಖಾತೆ ಸಚಿವ ಗೋಪಾಲ್ ರೈ
ನವದೆಹಲಿ: ಅಧಿಕ ವಾಯುಮಾಲಿನ್ಯದ ಕಾರಣದಿಂದ ಬಂದ್ ಆಗಿದ್ದ ಶಾಲಾ- ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳಲ್ಲಿ ನವೆಂಬರ್ 29 ರಿಂದ ದೈಹಿಕ ತರಗತಿಗಳು ಪುನರಾರಂಭಗೊಳ್ಳಲಿವೆ ಎಂದು ದೆಹಲಿ ಪರಿಸರ ಸಚಿವ ಗೋಪಾಲ್ ರೈ ಅವರು ಬುಧವಾರ ಹೇಳಿದ್ದಾರೆ.
ಸೋಮವಾರದಿಂದ ಎಲ್ಲಾ ಸರ್ಕಾರಿ ಕಚೇರಿಗಳು ತೆರೆಯಲಿವೆ ಎಂದು ತಿಳಿಸಿದ ಸಚಿವರು, ಸರ್ಕಾರಿ ನೌಕರರು ಸಾರ್ವಜನಿಕ ಸಾರಿಗೆ ಬಳಸಬೇಕು ಒತ್ತಾಯಿಸಿದರು ಮತ್ತು ಅವರಿಗಾಗಿ ವಿಶೇಷ ಬಸ್‌ಗಳನ್ನು ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ.
ಇದನ್ನು ಓದಿ: ವಾಯು ಮಾಲಿನ್ಯ: ದೆಹಲಿಯಲ್ಲಿ ಶಾಲೆಗಳಲ್ಲಿನ ಭೌತಿಕ ತರಗತಿಗಳ ಮೇಲಿನ ನಿರ್ಬಂಧ ಮುಂದುವರಿಕೆ
ಅಗತ್ಯ ಸೇವೆಗಳಲ್ಲಿ ತೊಡಗಿರುವವರನ್ನು ಹೊರತುಪಡಿಸಿ ಸಿಎನ್‌ಜಿ ಮತ್ತು ಎಲೆಕ್ಟ್ರಿಕ್ ವಾಹನಗಳನ್ನು ಮಾತ್ರ ನವೆಂಬರ್ 27 ರಿಂದ ದೆಹಲಿ ಪ್ರವೇಶಿಸಲು ಅನುಮತಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ಇತರ ಇಂಧನ ಬಳಸುವ ವಾಹನಗಳ ಪ್ರವೇಶದ ಮೇಲಿನ ನಿಷೇಧವನ್ನು ಡಿಸೆಂಬರ್ 3 ರವರೆಗೆ ಇರುತ್ತದೆ ಎಂದು ರೈ ಅವರು ಹಿರಿಯ ಅಧಿಕಾರಿಗಳೊಂದಿಗೆ ನಡೆದ ಪರಿಶೀಲನಾ ಸಭೆಯ ನಂತರ ಹೇಳಿದ್ದಾರೆ.
ಗಾಳಿಯ ಗುಣಮಟ್ಟದಲ್ಲಿ ಸುಧಾರಣೆಯಾದ ಹಿನ್ನೆಲೆಯಲ್ಲಿ ಮತ್ತು ಕಾರ್ಮಿಕರಿಗೆ ಉಂಟಾಗುವ ಅನಾನುಕೂಲತೆಯ ದೃಷ್ಟಿಯಿಂದ ದೆಹಲಿ ಸರ್ಕಾರವು ನಿರ್ಮಾಣ ಮತ್ತು ನೆಲಸಮ ಚಟುವಟಿಕೆಗಳ ಮೇಲಿನ ನಿಷೇಧವನ್ನು ಸೋಮವಾರ ತೆಗೆದುಹಾಕಿದೆ.