744 ಕೇರಳ ಪೊಲೀಸರು ಕ್ರಿಮಿನಲ್ ಪ್ರಕರಣಗಳಲ್ಲಿ ಆರೋಪಿಗಳು: ಪಿಣರಾಯಿ ವಿಜಯನ್ ಬಹಿರಂಗ

ರಾಜ್ಯದಲ್ಲಿ ಪೊಲೀಸರು ಕ್ರಿಮಿನಲ್ ದೌರ್ಜನ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಕೊಚ್ಚಿ: ಕೇರಳ ರಾಜ್ಯದಲ್ಲಿ ಒಟು 744 ಮಂದಿ ಪೊಲೀಸರು ಕ್ರಿಮಿನಲ್ ಪ್ರಕರಣಗಳನ್ನು ಎದುರಿಸುತ್ತಿದ್ದಾರೆ ಹಾಗೂ ಅವರಲ್ಲಿ 18 ಮಂದಿ ಸೇವೆಯಿಂದ ಅಮಾನತುಗೊಂಡಿದ್ದಾರೆ ಎನ್ನುವ ಸಂಗತಿ ತಿಳಿದುಬಂದಿದೆ. 

ಈ ಸಂಗತಿಯನ್ನು ಸಿ.ಎಂ ಪಿಣರಾಯಿ ವಿಜಯನ್ ಅವರೇ ವಿಧಾನಸಭೆಯಲ್ಲಿ ತಿಳಿಸಿದ್ದಾರೆ. ಶಾಸಕರೊಬ್ಬರು ವಿಧಾನಸಭೆಯಲ್ಲಿ ಕೇಳಿದ್ದ ಪ್ರಶ್ನೆಗೆ ಉತ್ತರಿಸುತ್ತಾ ಪಿಣರಾಯಿ ವಿಜಯನ್ ಈ ವಿವರ ನೀಡಿದ್ದಾರೆ. 

ರಾಜ್ಯದಲ್ಲಿ ಪೊಲೀಸರು ಕ್ರಿಮಿನಲ್ ದೌರ್ಜನ್ಯಗಳಲ್ಲಿ ಭಾಗಿಯಾಗುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆತಂಕ ವ್ಯಕ್ತವಾಗಿದೆ. ಹೀಗಾಗಿ ತಾವು ವಿಧಾನಸಭೆಯಲ್ಲಿ ಪ್ರಶ್ನೆ ಕೇಳಿದ್ದಾಗಿ ಶಾಸಕ ರೇಮ ಅವರು ತಿಳಿಸಿದ್ದಾರೆ. ಪೊಲೀಸರ ಸಮೂಹದಲ್ಲೇ ಕ್ರಿಮಿನಲ್ ಗಳು ಇದ್ದಾರೆ ಎನ್ನುವುದು ಆತಂಕದ ಸಂಗತಿ ಎಂದು ಅವರು ಭಿಪ್ರಾಯಪಟ್ಟಿದ್ದಾರೆ.

ಡಿಪಾರ್ಟ್ ಮೆಂಟ್ ಮಟ್ಟದಲ್ಲಿ ಕ್ರಿಮಿನಲ್ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸರ್ಕಾರ ಸ್ಪಷ್ಟನೆ ನೀಡುತ್ತಿದ್ದರೂ ಅದರಿಂದ ಪ್ರಯೋಜನವಾಗುತ್ತಿಲ್ಲ ಎನ್ನುವ ಆರೋಪ ಕೇಳಿಬಂದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com