ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ನಟಿ ಕಂಗನಾಗೆ ದೆಹಲಿ ಸರ್ಕಾರದ ಸಮನ್ಸ್!

ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ.
ಕಂಗನಾ ರಣಾವತ್
ಕಂಗನಾ ರಣಾವತ್

ನವದೆಹಲಿ: ಸಿಖ್ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಹೇಳಿಕ ನೀಡಿರುವ ಬಾಲಿವುಡ್ ನಟಿ ಕಂಗನಾ ರಣಾವತ್ ಅವರಿಗೆ ದೆಹಲಿ ವಿಧಾನಸಭೆ ಸಮನ್ಸ್ ಜಾರಿ ಮಾಡಿದೆ.

ದೆಹಲಿ ವಿಧಾನಸಭೆಯ ಶಾಂತಿ ಮತ್ತು ಸೌಹಾರ್ದ ಸಮಿತಿ, ಕಂಗನಾಗೆ ಈ ಸಮನ್ಸ್ ಜಾರಿ ಮಾಡಿದ್ದು, ಡಿಸೆಂಬರ್ 6 ರಂದು ಮಧ್ಯಾಹ್ನ 12:00 ಗಂಟೆಗೆ ಸಮಿತಿಯ ಮುಂದೆ ಹಾಜರಾಗುವಂತೆ ಸೂಚಿಸಿದೆ. ಆಮ್ ಆದ್ಮಿ ಪಕ್ಷದ ಶಾಸಕ ರಾಘವ್ ಚಡ್ಡಾ ಅವರ ಅಧ್ಯಕ್ಷತೆಯಲ್ಲಿ ಕಂಗನಾ ಅವರ ಆಕ್ಷೇಪಾರ್ಹ ಹೇಳಿಕೆ ಕುರಿತು ಸಮನ್ಸ್ ನೀಡಿದ್ದಾರೆ.

ಅಲ್ಲದೆ, ಇನ್‌ಸ್ಟಾಗ್ರಾಮ್‌ನಲ್ಲಿ ಸಿಖ್ ಸಮುದಾಯದ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ನಟಿ ಕಂಗನಾ ರನೌತ್ ವಿರುದ್ಧ ದೆಹಲಿ ಸಿಖ್ ಗುರುದ್ವಾರ ನಿರ್ವಹಣಾ ಸಮಿತಿ ಕೆಲ ದಿನಗಳ ಹಿಂದೆ ದೂರು ದಾಖಲಿಸಿದೆ. “ರನೌತ್ ಅವರು ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಇತ್ತೀಚಿನ ಪೋಸ್ಟ್‌ನಲ್ಲಿ "ಉದ್ದೇಶಪೂರ್ವಕವಾಗಿ" ರೈತರ ಪ್ರತಿಭಟನೆಯನ್ನು 'ಖಾಲಿಸ್ತಾನಿ ಚಳುವಳಿ' ಎಂದು ಹೇಳಿದ್ದಾರೆ.

ಅಲ್ಲದೆ, ನಟಿ ಸಿಖ್ ಸಮುದಾಯದ ವಿರುದ್ಧ "ಆಕ್ಷೇಪಾರ್ಹ ಮತ್ತು ಅವಹೇಳನಕಾರಿ" ಭಾಷೆಯನ್ನು ಬಳಸಿದ್ದಾರೆ ಎಂದು ಮಂದಿರ್ ಮಾರ್ಗ್ ಠಾಣೆಯಲ್ಲಿ ಸಿಖ್ ಸಮಿತಿ ದಾಖಲಿಸಿದ ದೂರಿನಲ್ಲಿ ಉಲ್ಲೇಖಿಸಿದೆ. ಈ ಹಿಂದೆ, ದೇಶದ ಸ್ವಾತಂತ್ರ್ಯದ ಬಗ್ಗೆ ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿದ್ದ ಕಂಗನಾ, ರಾಷ್ಟ್ರಪಿತ ಮಹಾತ್ಮ ಗಾಂಧಿ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.

ಸುಭಾಷ್ ಚಂದ್ರ ಬೋಸ್ ಮತ್ತು ಭಗತ್ ಸಿಂಗ್ ಅವರಿಗೆ ಮಹಾತ್ಮ ಗಾಂಧಿಯವರ ಬೆಂಬಲ ಸಿಗಲಿಲ್ಲ ಎಂದು ಕಂಗನಾ ಹೇಳಿಕೊಂಡಿದ್ದರು. ಅಷ್ಟೇ ಅಲ್ಲ, ಬಾಪು ಅವರ ‘ಅಹಿಂಸಾ ಮಂತ್ರ’ವನ್ನು ಗೇಲಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಬಾಲಿವುಡ್ ನಟಿ ಕಂಗನಾ ವಿರುದ್ಧ ದೇಶವ್ಯಾಪಿ ಟೀಕೆಗಳು ಸಹ ಕೇಳಿಬಂದಿದ್ದವು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com