ಸಾಕಷ್ಟು ದಾಸ್ತಾನು ಇರುವ ಹಿನ್ನೆಲೆಯಲ್ಲಿ ಕೋವಿಶೀಲ್ಡ್, ಕೋವ್ಯಾಕ್ಸಿನ್‌ ವಾಣಿಜ್ಯ ರಫ್ತಿಗೆ ಕೇಂದ್ರ ಅಸ್ತು

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ತಯಾರಕರಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆಗಳ ಸಾಕಷ್ಟು ದಾಸ್ತಾನು ಪರಿಗಣಿಸಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ ಲಸಿಕೆಯನ್ನು ವಾಣಿಜ್ಯ ರಫ್ತು ಮಾಡಲು ಕೇಂದ್ರ...
ಕೋವಿಶೀಲ್ಡ್ ಮತ್ತು ಕೋವಾಕ್ಸಿನ್
ಕೋವಿಶೀಲ್ಡ್ ಮತ್ತು ಕೋವಾಕ್ಸಿನ್

ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಹಾಗೂ ತಯಾರಕರಲ್ಲಿ ಲಭ್ಯವಿರುವ ಕೋವಿಡ್-19 ಲಸಿಕೆಗಳ ಸಾಕಷ್ಟು ದಾಸ್ತಾನು ಪರಿಗಣಿಸಿ ಕೋವಿಶೀಲ್ಡ್ ಮತ್ತು ಕೋವಾಕ್ಸಿನ್‌ ಲಸಿಕೆಯನ್ನು ವಾಣಿಜ್ಯ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ.

ಆದಾಗ್ಯೂ, ದೇಶೀಯ ಲಭ್ಯತೆಯ ಕೊರತೆಯಿಲ್ಲ ಎಂದು ಖಚಿತಪಡಿಸಿಕೊಳ್ಳಲು ರಫ್ತು ಮಾಡಬೇಕಾದ ಕೋವಿಡ್ ಲಸಿಕೆಗಳ ಪ್ರಮಾಣವನ್ನು ಸರ್ಕಾರವೇ ಪ್ರತಿ ತಿಂಗಳು ನಿರ್ಧರಿಸುತ್ತದೆ.

"22.72 ಕೋಟಿಗೂ ಹೆಚ್ಚು ಬಾಕಿ ಮತ್ತು ಬಳಕೆಯಾಗದ ಕೋವಿಡ್-19 ಲಸಿಕೆ ಡೋಸ್‌ಗಳು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಇನ್ನೂ ಲಭ್ಯವಿವೆ. ಲಸಿಕೆ ಉತ್ಪಾದನೆಯು ಹೆಚ್ಚುತ್ತಿದೆ ಮತ್ತು ಹೆಚ್ಚುವರಿ ಸರಬರಾಜು ಇರುತ್ತದೆ. ಇದನ್ನು ಗಮನದಲ್ಲಿಟ್ಟುಕೊಂಡು ಕೋವಿಶೀಲ್ಡ್ ಮತ್ತು ಕೋವಾಕ್ಸಿನ್ ಲಸಿಕೆ ವಾಣಿಜ್ಯ ರಫ್ತಿಗೆ ಅವಕಾಶ ನೀಡುವ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ" ಎಂದು ಅಧಿಕೃತ ಮೂಲವೊಂದು ಪಿಟಿಐಗೆ ತಿಳಿಸಿದೆ.

ಇತ್ತೀಚಿಗಷ್ಟೇ ವಿಶ್ವಸಂಸ್ಥೆ ಬೆಂಬಲಿತ ಕೋವ್ಯಾಕ್ಸ್(COVAX) ಜಾಗತಿಕ ಲಸಿಕೆ ಕಾರ್ಯಕ್ರಮದ ಅಡಿಯಲ್ಲಿ ನೇಪಾಳ, ತಜಕಿಸ್ತಾನ್ ಮತ್ತು ಮೊಜಾಂಬಿಕ್‌ಗೆ 50 ಲಕ್ಷ ಡೋಸ್ ಕೋವಿಶೀಲ್ಡ್ ಲಸಿಕೆಯನ್ನು ರಫ್ತು ಮಾಡಲು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾಗೆ ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com