'ಸಂವಿಧಾನ ದಿನಾಚರಣೆ' ಕಾರ್ಯಕ್ರಮ: ಕಾಂಗ್ರೆಸ್, ಹಲವು ವಿರೋಧ ಪಕ್ಷಗಳ ಬಹಿಷ್ಕಾರ

ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶುಕ್ರವಾರ ನಡೆಯಲಿರುವ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ನಿರ್ಧರಿಸಿವೆ ಮೂಲಗಳಿಂದ ತಿಳಿದುಬಂದಿದೆ.
ಸಂಸತ್
ಸಂಸತ್

ನವದೆಹಲಿ: ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಶುಕ್ರವಾರ ನಡೆಯಲಿರುವ 'ಸಂವಿಧಾನ ದಿನಾಚರಣೆ' ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ಮತ್ತು ಇತರ ಹಲವು ವಿರೋಧ ಪಕ್ಷಗಳು ನಿರ್ಧರಿಸಿವೆ ಮೂಲಗಳಿಂದ ತಿಳಿದುಬಂದಿದೆ.

ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶುಕ್ರವಾರ ಸಂಸತ್ತಿನ ಸೆಂಟ್ರಲ್ ಹಾಲ್‌ನಲ್ಲಿ ಸಂವಿಧಾನ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಸಚಿವರು ಭಾಗವಹಿಸಲಿದ್ದಾರೆ.

ಕಾರ್ಯಕ್ರಮವನ್ನು ಬಹಿಷ್ಕರಿಸಲು ಕಾಂಗ್ರೆಸ್ ನಿರ್ಧರಿಸಿದೆ ಮತ್ತು ಹಲವಾರು ಇತರ ವಿರೋಧ ಪಕ್ಷಗಳು ಒಗ್ಗಟ್ಟಿನಿಂದ ಕೈ ಜೋಡಿಸಿವೆ ಎಂದು ಮೂಲಗಳು ಖಚಿತಪಡಿಸಿವೆ.

ಕಾಂಗ್ರೆಸ್ ಬಹಿಷ್ಕಾರದಲ್ಲಿ ಭಾಗಿಯಾಗಲು ಹಲವು ವಿರೋಧ ಪಕ್ಷಗಳ ನಾಯಕರೊಂದಿಗೆ ಸಂಪರ್ಕದಲ್ಲಿದೆ ಎಂದು ಮೂಲಗಳು ತಿಳಿಸಿವೆ. ಡಿಎಂಕೆ, ಶಿವಸೇನೆ, ಆರ್‌ಎಸ್‌ಪಿ, ಎನ್‌ಸಿಪಿ, ಎಸ್‌ಪಿ, ಟಿಎಂಸಿ, ಸಿಪಿಐ, ಸಿಪಿಐ(ಎಂ), ಆರ್‌ಜೆಡಿ, ಜೆಎಂಎಂ ಮತ್ತು ಐಯುಎಂಎಲ್ ಕೂಡ ಬಹಿಷ್ಕಾರಕ್ಕೆ ಸೇರುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಭಾರತದ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸರ್ಕಾರದ ‘ಆಜಾದಿ ಕಾ ಅಮೃತ್ ಮಹೋತ್ಸವ’ ಕಾರ್ಯಕ್ರಮದ ಭಾಗವಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸುವುದಿಲ್ಲ ಎಂದು ಸಿಪಿಐ, ಸಿಪಿಐ(ಎಂ), ಆರ್‌ಜೆಡಿ, ಡಿಎಂಕೆ ಮತ್ತು ತೃಣಮೂಲ ಕಾಂಗ್ರೆಸ್‌ನ ಹಿರಿಯ ನಾಯಕರು ಖಚಿತಪಡಿಸಿದ್ದಾರೆ.

ವಿರೋಧ ಪಕ್ಷದ ನಾಯಕರು ಪರಸ್ಪರ ಮಾತನಾಡಿಕೊಂಡು ಸರ್ಕಾರದ ವಿರುದ್ಧ ಈ ಕ್ರಮ ಕೈಗೊಳ್ಳಲು ನಿರ್ಧರಿಸಿದ್ದಾರೆ ಎಂದು ಎಡಪಕ್ಷದ ಹಿರಿಯ ನಾಯಕರೊಬ್ಬರು ತಿಳಿಸಿದ್ದಾರೆ. ಸರ್ಕಾರ ನಿಯಮಿತವಾಗಿ ‘ಸಂವಿಧಾನವನ್ನು ಅವಮಾನಿಸುತ್ತಿದೆ’ ಎಂದು ಆರೋಪಿಸಿದರು.

ಕಾರ್ಯಕ್ರಮಕ್ಕೆ ಹಾಜರಾಗಲು ತಮ್ಮ ಯಾವುದೇ ಸಂಸದರು ಪ್ರಸ್ತುತ ದೆಹಲಿಯಲ್ಲಿಲ್ಲ ಎಂದು ಟಿಎಂಸಿ ನಾಯಕರೊಬ್ಬರು ತಿಳಿಸಿದ್ದಾರೆ.

ಲೋಕಸಭೆ ಸೆಕ್ರೆಟರಿಯೇಟ್ ಮತ್ತು ಸ್ಪೀಕರ್ ಆಯೋಜಿಸಿರುವ ಕಾರ್ಯಕ್ರಮಕ್ಕೆ ಅವರು ಹಾಜರಾಗುವುದಿಲ್ಲ ಎಂದು ಡಿಎಂಕೆ ಹಿರಿಯ ನಾಯಕರೊಬ್ಬರು ಖಚಿತಪಡಿಸಿದ್ದಾರೆ.

ಆದಾಗ್ಯೂ, ಟಿಆರ್‌ಎಸ್, ಬಿಜೆಡಿ ಮತ್ತು ವೈಎಸ್‌ಆರ್ ಕಾಂಗ್ರೆಸ್‌ನ ಸಂಸದರು ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ ಎಂದು ಮೂಲಗಳು ಸೂಚಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com