ಡಿ.15 ರಿಂದ ಅಂತಾರಾಷ್ಟ್ರೀಯ ವಿಮಾನಯಾನ ಪುನರಾರಂಭ: ನಾಗರಿಕ ವಿಮಾನಯಾನ ಸಚಿವಾಲಯ

ಭಾರತ ಡಿಸೆಂಬರ್ 15 ರಿಂದ ಅಂತಾರಾಷ್ಟ್ರೀಯ ವಿಮಾನಯಾನವನ್ನು ಪುನರಾರಂಭಿಸಲು ಸಿದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ತಿಳಿಸಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಭಾರತ ಡಿಸೆಂಬರ್ 15 ರಿಂದ ಅಂತಾರಾಷ್ಟ್ರೀಯ ವಿಮಾನಯಾನವನ್ನು ಪುನರಾರಂಭಿಸಲು ಸಿದ್ಧವಾಗಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯ ಶುಕ್ರವಾರ ತಿಳಿಸಿದೆ.

ಗೃಹ ಸಚಿವಾಲಯ, ವಿದೇಶಾಂಗ ಸಚಿವಾಲಯ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದೊಂದಿಗೆ ಸಮಾಲೋಚಿಸಿದ ನಂತರ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ವಿಮಾನಯಾನ ಸಚಿವಾಲಯ ಇಂದು ಪ್ರಕಟಣೆಯಲ್ಲಿ ತಿಳಿಸಿದೆ.

ಎರಡು ದಿನಗಳ ಹಿಂದಷ್ಟೇ ಅಂತಾರಾಷ್ಟ್ರೀಯ ವಿಮಾನ ಸೇವೆ ಈ ವರ್ಷಾಂತ್ಯದ ವೇಳೆಗೆ ಸಾಮಾನ್ಯ ಸ್ಥಿತಿಗೆ ಮರಳುವ ನಿರೀಕ್ಷೆಯಿದೆ ಎಂದು ನಾಗರಿಕ ವಿಮಾನಯಾನ ಕಾರ್ಯದರ್ಶಿ ರಾಜೀವ್ ಬನ್ಸಾಲ್ ಅವರು ಹೇಳಿದ್ದರು.

ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಕಳೆದ ವರ್ಷ ಮಾರ್ಚ್ 23 ರಿಂದ ಭಾರತದಲ್ಲಿ ನಿಗದಿತ ಅಂತಾರಾಷ್ಟ್ರೀಯ ವಿಮಾನಯಾನವನ್ನು ಸ್ಥಗಿತಗೊಳಿಸಲಾಗಿತ್ತು.

ಆದಾಗ್ಯೂ, ವಿಶೇಷ ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಕಳೆದ ವರ್ಷ ಜುಲೈನಿಂದ ಸುಮಾರು 28 ದೇಶಗಳೊಂದಿಗೆ ಏರ್ ಬಬಲ್ ವ್ಯವಸ್ಥೆಗಳ ಅಡಿಯಲ್ಲಿ ಸಂಚರಿಸುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com