ಡಿಸೆಂಬರ್ 6 ರಂದು ಭಾರತಕ್ಕೆ ರಷ್ಯಾ ಅಧ್ಯಕ್ಷ ಪುಟಿನ್ ಭೇಟಿ; ಮೋದಿ ಜೊತೆ ಮಾತುಕತೆ
ರಷ್ಯಾ ಅಧ್ಯಕ್ಷ ಪುಟಿನ್ ಡಿ.06 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
Published: 26th November 2021 08:38 PM | Last Updated: 27th November 2021 01:25 PM | A+A A-

ಮೋದಿ-ಪುಟಿನ್ (ಸಂಗ್ರಹ ಚಿತ್ರ)
ನವದೆಹಲಿ: ರಷ್ಯಾ ಅಧ್ಯಕ್ಷ ಪುಟಿನ್ ಡಿ.06 ರಂದು ಭಾರತಕ್ಕೆ ಭೇಟಿ ನೀಡಲಿದ್ದು, ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಶೃಂಗಸಭೆ ಮಾತುಕತೆ ನಡೆಸಲಿದ್ದಾರೆ ಎಂದು ವಿದೇಶಾಂಗ ಸಚಿವಾಲಯ ಮಾಹಿತಿ ನೀಡಿದೆ.
ದ್ವಿಪಕ್ಷೀಯ ಸಂಬಂಧದ ಸಂಪೂರ್ಣ ಹರವನ್ನು ಪರಿಶೀಲನೆ ಮಾಡುವುದಕ್ಕೆ ಉಭಯ ದೇಶದ ನಾಯಕರೂ ಭೇಟಿ ಮಾಡುವ ವ್ಯವಸ್ಥೆಯನ್ನು ಹೊಂದಲಾಗಿದೆ.
ಇದನ್ನೂ ಓದಿ: ಪುಟಿನ್ ಭಾರತ ಭೇಟಿ: ರಷ್ಯಾ-ಭಾರತದ 5 ಸಾವಿರ ಕೋಟಿ ರೂ. ಮೌಲ್ಯದ AK-203 ಒಪ್ಪಂದಕ್ಕೆ ತಯಾರಿ
ಎಂಇಎ ವಕ್ತಾರ ಅರಿಂದಮ್ ಬಗಾಚಿ ಈ ಭೇಟಿಯ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದು, ಭಾರತ-ರಷ್ಯಾದ 21 ನೇ ಶೃಂಗಸಭೆಯಲ್ಲಿ ಭಾಗವಹಿಸಲು ಡಿ.06 ರಂದು ರಂದು ಭಾರತಕ್ಕೆ ಆಗಮಿಸಲಿದ್ದಾರೆ. ಕೋವಿಡ್-19 ಕಾರಣದಿಂದಾಗಿ ಶೃಂಗಸಭೆಯನ್ನು ಮುಂದೂಡಲಾಗಿತ್ತು.