ಕೋವಿಡ್-19 ಲಸಿಕೆ: ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಮಹತ್ವದ ಸಭೆ

ಅತ್ಯಂತ ವೇಗವಾಗಿ ಹಬ್ಬುವ, ಲಸಿಕೆಗೂ ಬಗ್ಗದ ಡೆಲ್ಟಾಗಿಂತಲೂ ಅಪಾಯಕಾರಿ ಎಂದು ಬಣ್ಣಿತವಾದ ಕೋವಿಡ್'ನ ಹೊಸ ರೂಪಾಂತರಿ ಬೋಟ್ಸ್ವಾನಾ ತಳಿ' ಇದೀಗ ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಶನಿವಾರ ಮಹತ್ವದ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಪ್ರಧಾನಿ ಮೋದಿ
ಪ್ರಧಾನಿ ಮೋದಿ

ನವದೆಹಲಿ: ಅತ್ಯಂತ ವೇಗವಾಗಿ ಹಬ್ಬುವ, ಲಸಿಕೆಗೂ ಬಗ್ಗದ ಡೆಲ್ಟಾಗಿಂತಲೂ ಅಪಾಯಕಾರಿ ಎಂದು ಬಣ್ಣಿತವಾದ ಕೋವಿಡ್'ನ ಹೊಸ ರೂಪಾಂತರಿ ಬೋಟ್ಸ್ವಾನಾ ತಳಿ' ಇದೀಗ ಭಾರತದಲ್ಲೂ ಆತಂಕವನ್ನು ಸೃಷ್ಟಿಸಿದ್ದು, ಈ ನಡುವಲ್ಲೇ ಪ್ರಧಾನಮಂತ್ರಿ ನರೇಂದ್ರ ಮೋದಿಯವರು, ಪರಿಸ್ಥಿತಿ ಪರಿಶೀಲನೆಗೆ ಉನ್ನತಾಧಿಕಾರಿಗಳೊಂದಿಗೆ ಶನಿವಾರ ಮಹತ್ವದ ಸಭೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.

ಈಗಾಗಲೇ ಸಭೆ ಆರಂಭವಾಗಿದ್ದು, ಸಂಪುಟ ಕಾರ್ಯದರ್ಶಿ ರಾಜೀವ್ ಗೌಬಾ, ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್, ಪ್ರಧಾನಿ ಮೋದಿಯವರ ಪ್ರಧಾನ ಕಾರ್ಯದರ್ಶಿ ಪಿಕೆ ಮಿಶ್ರಾ ಮತ್ತು ನೀತಿ ಆಯೋಗದ ಸದಸ್ಯ (ಆರೋಗ್ಯ) ಡಾ ವಿಕೆ ಪಾಲ್ ಸೇರಿದಂತೆ ಇತರೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆಂದು ವರದಿಗಳು ತಿಳಿಸಿವೆ.

ವಿಶ್ವದ ಹಲವು ದೇಶಗಳಲ್ಲಿ ಕೊರೋನಾದ ಹೊಸ ತಳಿ  B.1.1.529 ವೈರಸ್ ಪತ್ತೆಯಾಗಿದ್ದು, ವಿಶ್ವ ಆರೋಗ್ಯ ಸಂಸ್ಥೆ ಅದನ್ನು ಓಮಿಕ್ರಾನ್ ಎಂದು ಹೆಸರಿಸಿದೆ.  ಹೀಗಾಗಿ ಕೇಂದ್ರ ಸರ್ಕಾರವೂ ಕೆಲವು ಮುನ್ನೆಚ್ಚರಿಕಾ ಕ್ರಮಗಳನ್ನು ಸೂಚಿಸಿದೆ.

ಐರೋಪ್ಯ ರಾಷ್ಟ್ರಗಳು, ದಕ್ಷಿಣ ಆಫ್ರಿಕಾ, ಬ್ರೆಜಿಲ್‌, ಬಾಂಗ್ಲಾದೇಶ, ಬೋಟ್ವಾನಾ, ಚೀನಾ, ಮಾರಿಷಸ್‌, ನ್ಯೂಜಿಲೆಂಡ್‌, ಸಿಂಗಾಪುರ, ಹಾಂಗ್‌ಕಾಂಗ್‌, ಇಸ್ರೆಲ್‌ನಿಂದ ಭಾರತಕ್ಕೆ ಬರುವವರಿಗೆ ಕೊವಿಡ್ ಟೆಸ್ಟ್‌ ಸೇರಿ ಹೆಚ್ಚುವರಿ ಕ್ರಮ ಅನುಸರಿಸಲು ಸೂಚನೆ ನೀಡಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com