ಕೋವಿಡ್-19: ಭಾರತದಲ್ಲಿಂದು 8,774 ಹೊಸ ಕೇಸ್ ಪತ್ತೆ, 621 ಮಂದಿ ಸಾವು

ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,774 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 621 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ನವದೆಹಲಿ: ಭಾರತದಲ್ಲಿ ಮಹಾಮಾರಿ ಕೊರೋನಾ ಅಬ್ಬರ ಇಳಿಕೆಯಾಗಿದ್ದು, ದೇಶದಲ್ಲಿ ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡ 24 ತಾಸುಗಳ ಅವಧಿಯಲ್ಲಿ 8,774 ಕೊರೋನಾ ಪ್ರಕರಣಗಳು ದೃಢಪಟ್ಟಿದ್ದು, ಇದೇ ಅವಧಿಯಲ್ಲಿ 621 ಮಂದಿ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.

ಭಾನುವಾರದ ಅಂಕಿ ಸಂಖ್ಯೆಯೊಂದಿಗೆ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,45,72,523ಕ್ಕೆ ತಲುಪಿದ್ದು, ಸಾವಿನ ಸಂಖ್ಯೆ 4,68,554ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.

ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ದೇಶದಲ್ಲಿ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 1,05,691ಕ್ಕೆ ತಲುಪಿದೆ.

ಈ ನಡುವೆ ಕಳೆದ 24 ಗಂಟೆಗಳಲ್ಲಿ 9,481 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 3,39,98,278ಕ್ಕೆ ತಲುಪಿದೆ.

ಇನ್ನು ಭಾರತದಲ್ಲಿ ಒಂದೇ 9,69,354 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, 63,82,47,889 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಭಾರತದಲ್ಲಿ ಜನವರಿ 16 ರಂದು ಸ್ವದೇಶಿ ನಿರ್ಮಿತ ಕೋವಿಶೀಲ್ಡ್ ಮತ್ತು ಕೋವ್ಯಾಕ್ಸಿನ್ ಕೊರೋನಾ ಲಸಿಕೆಗೆ ಪ್ರಧಾನಿ ಮೋದಿಯವರು ಚಾಲನೆ ನೀಡಿದ್ದು, ತಮ್ಮ ಜೀವವನ್ನೇ ಪಣಕ್ಕಿಟ್ಟು ಕೊರೋನಾ ವಿರುದ್ಧ ಹೋರಾಟ ಮಾಡುತ್ತಿರುವ ಕೊರೋನಾ ವಾರಿಯರ್ಸ್'ಗೆ ಲಸಿಕೆಯ ಮೊದಲ ಆದ್ಯತೆಯನ್ನು ನೀಡಲಾಗಿತ್ತು. ಬಳಿಕ 45 ವರ್ಷ ಮೇಲ್ಪಟ್ಟ ಎಲ್ಲಾ ನಾಗರೀಕರಿಗೆ ಲಸಿಕೆ ನೀಡಲಾಗಿತ್ತು. ಮೇ.1ರಿಂದ 18-45 ವರ್ಷ ವಯಸ್ಸಿನ ಎಲ್ಲರಿಗೂ ಲಸಿಕೆ ನೀಡಲಾಗುತ್ತಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ ಒಟ್ಟಾರೆ 1,21,94,71,134 ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com