ಓಮಿಕ್ರಾನ್ ಆತಂಕ: ಮಹಾರಾಷ್ಟ್ರದಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿದರೆ 500 ರೂ. ದಂಡ
ಹೊಸ ಕೊರೋನಾ ವೈರಸ್ ರೂಪಾಂತರವಾದ `ಓಮಿಕ್ರಾನ್' ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಅನುಸರಿಸದಿದ್ದರೆ ದಂಡ ವಿಧಿಸುವುದಾಗಿ ಶನಿವಾರ ಘೋಷಿಸಿದೆ.
Published: 28th November 2021 12:33 AM | Last Updated: 28th November 2021 12:33 AM | A+A A-

ಸಾಂದರ್ಭಿಕ ಚಿತ್ರ
ಮುಂಬೈ: ಹೊಸ ಕೊರೋನಾ ವೈರಸ್ ರೂಪಾಂತರವಾದ `ಓಮಿಕ್ರಾನ್' ಜಗತ್ತಿನಾದ್ಯಂತ ತೀವ್ರ ಆತಂಕಕ್ಕೆ ಕಾರಣವಾಗಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕೋವಿಡ್ ನಿಯಮಗಳನ್ನು ಅನುಸರಿಸದಿದ್ದರೆ ದಂಡ ವಿಧಿಸುವುದಾಗಿ ಶನಿವಾರ ಘೋಷಿಸಿದೆ.
ಅಂತರಾಷ್ಟ್ರೀಯ ಪ್ರಯಾಣಿಕರಿಗೆ ನಿಯಮಗಳ ಪ್ರಕಾರ, ಮುಂಬೈ ಮಹಾನಗರ ಪಾಲಿಕೆ ಮತ್ತು ಕೇಂದ್ರ ಆರೋಗ್ಯ ಸಚಿವಾಲಯದ ಸಹಯೋಗದಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಿದೆ ಎಂದು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಸೀತಾರಾಮ್ ಕುಂಟೆ ಅವರು ಪಿಟಿಐಗೆ ತಿಳಿಸಿದ್ದಾರೆ.
ಇದನ್ನು ಓದಿ: 'ಓಮಿಕ್ರಾನ್ ಹೇಗೆ ವಿಕಸನಗೊಳ್ಳುತ್ತದೆ ಎಂಬುದನ್ನು ಕಾದು ನೋಡಬೇಕು': ಐಸಿಎಂಆರ್ ಉನ್ನತ ವಿಜ್ಞಾನಿ
ವಿದೇಶದಿಂದ ಬರುವ ಎಲ್ಲಾ ಪ್ರಯಾಣಿಕರು ಕೇಂದ್ರ ಸರ್ಕಾರದ ನಿರ್ದೇಶನಗಳಿಂದ ನಿಯಂತ್ರಿಸಲ್ಪಡುತ್ತಾರೆ. ಆದರೆ ರಾಜ್ಯಕ್ಕೆ ಆಗಮಿಸುವ ದೇಶೀಯ ಪ್ರಯಾಣಿಕರು ಸಂಪೂರ್ಣವಾಗಿ ಎರಡೂ ಡೋಸ್ ಲಸಿಕೆ ಪಡೆದಿರಬೇಕು ಅಥವಾ 72 ಗಂಟೆಗಳ ಮುನ್ನ ಪಡೆದ ಆರ್‌ಟಿ-ಪಿಸಿಆರ್ ನೆಗಟಿವ್ ವರದಿ ನೀಡಬೇಕು ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ.
ಹೊಸ ರೂಪಾಂತರದ ಪ್ರಕರಣಗಳು ಕಂಡುಬಂದಿರುವ ದಕ್ಷಿಣ ಆಫ್ರಿಕಾದ ಪ್ರಯಾಣಿಕರನ್ನು ಕ್ವಾರಂಟೈನ್ ಮಾಡಲಾಗುವುದು ಮತ್ತು ಅವರ ಮಾದರಿಗಳನ್ನು ಜೀನೋಮ್ ಅನುಕ್ರಮಕ್ಕಾಗಿ ಕಳುಹಿಸಲಾಗುವುದು ಎಂದು ನಿನ್ನೆಯಷ್ಚೇ ಮುಂಬೈ ಮೇಯರ್ ಕಿಶೋರಿ ಪೆಡ್ನೇಕರ್ ಅವರು ಹೇಳಿದ್ದರು.
ಕೋವಿಡ್ ನಿಯಮಗಳನ್ನು ಅನುಸರಿಸದ ವ್ಯಕ್ತಿಗೆ 500 ರೂಪಾಯಿ ದಂಡ ವಿಧಿಸಲಾಗುತ್ತದೆ ಎಂದು ಮಹಾರಾಷ್ಟ್ರ ಸರ್ಕಾರ ಹೊರಡಿಸಿದ ಹೊಸ ಮಾರ್ಗಸೂಚಿಗಳಲ್ಲಿ ತಿಳಿಸಲಾಗಿದೆ.