ನಾಳೆ ಸಂಸತ್ತಿನ ಚಳಿಗಾಲ ಅಧಿವೇಶನ ಆರಂಭ: ಸದಸ್ಯರ ಸಭೆ ಕರೆದ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ
ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.
Published: 28th November 2021 08:33 AM | Last Updated: 28th November 2021 12:16 PM | A+A A-

ಪ್ರಹ್ಲಾದ್ ಜೋಷಿ
ನವದೆಹಲಿ: ಸಂಸತ್ತಿನ ಚಳಿಗಾಲ ಅಧಿವೇಶನ ನಾಳೆ(ನ.29)ಆರಂಭವಾಗಲಿದೆ. ಈ ಹೊತ್ತಿನಲ್ಲಿ ಇಂದು ಬೆಳಗ್ಗೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಷಿ ವಿವಿಧ ಪಕ್ಷಗಳ ಲೋಕಸಭಾ ಸದಸ್ಯರ ಸಭೆ ನಡೆಸಲಿದ್ದಾರೆ.
ಈ ಚಳಿಗಾಲ ಅಧಿವೇಶನವನ್ನು ಬಿಜೆಪಿ ನೇತೃತ್ವದ ಎನ್ ಡಿಎ ಸರ್ಕಾರ ಪ್ರಮುಖವಾಗಿ ಪರಿಗಣಿಸಿದೆ. 3 ತಿದ್ದುಪಡಿ ಕೃಷಿ ಕಾಯ್ದೆ ವಾಪಸ್ ಪಡೆಯುವುದು ಸೇರಿದಂತೆ 26 ಹೊಸ ಮಸೂದೆಗಳನ್ನು ಮಂಡಿಸುವ ಉದ್ದೇಶವನ್ನು ಕೂಡ ಹೊಂದಿದೆ.
ಕಲಾಪ ಆರಂಭದ ದಿನವೇ ಕೃಷಿ ಕಾಯ್ದೆಯನ್ನು ವಾಪಾಸ್ ಪಡೆಯುವುದು ಸರ್ಕಾರದ ಪ್ರಮುಖ ಉದ್ದೇಶವಾಗಿದೆ. ಈ ವಾರದ ಆರಂಭದಲ್ಲಿ ಕೇಂದ್ರ ಸಚಿವ ಸಂಪುಟವು ಮಸೂದೆಯನ್ನು ಅಂಗೀಕರಿಸಿತ್ತು. ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಮೂರು ಕೃಷಿ ಕಾನೂನುಗಳನ್ನು ರದ್ದುಪಡಿಸುವುದು ಸರ್ಕಾರದ ಆದ್ಯತೆಯಾಗಿದೆ ಎಂದು ಸಭೆಯ ನಂತರ ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಸುದ್ದಿಗಾರರಿಗೆ ತಿಳಿಸಿದ್ದರು.
ಸರ್ಕಾರದ ಕಾರ್ಯಸೂಚಿಯು ಕ್ರಿಪ್ಟೋಕರೆನ್ಸಿ ಮತ್ತು ಅಧಿಕೃತ ಡಿಜಿಟಲ್ ಕರೆನ್ಸಿ ಬಿಲ್, 2021 ರ ನಿಯಂತ್ರಣವನ್ನು ಸಹ ಒಳಗೊಂಡಿದೆ. ಇಂದು ಬಿಜೆಪಿ ಸಂಸದೀಯ ಕಾರ್ಯಕಾರಿ ಸಮಿತಿಯು ಭಾನುವಾರ ಸಂಸತ್ತಿನ ಅನೆಕ್ಸ್‌ನಲ್ಲಿ ಪ್ರತ್ಯೇಕವಾಗಿ ಸಭೆ ನಡೆಸಲಿದೆ. ಚಳಿಗಾಲದ ಅಧಿವೇಶನ ಆರಂಭಕ್ಕೂ ಮುನ್ನ ಇಂದು ಸರ್ವಪಕ್ಷ ಸಭೆ ನಡೆಯಲಿದೆ.
Delhi | Leaders of various political parties arrive at the Parliament for an all-party meeting ahead of the commencement of the Winter Session pic.twitter.com/UTxCslHm7I
— ANI (@ANI) November 28, 2021
ರಾಜ್ಯಸಭಾ ಸಭಾಪತಿ ಎಂ ವೆಂಕಯ್ಯ ನಾಯ್ಡು ಅವರು ಸಹ ಮೇಲ್ಮನೆ ಸದಸ್ಯರ ಸಭೆ ಕರೆದಿದ್ದಾರೆ. ಸರ್ಕಾರದ ಕಾರ್ಯಸೂಚಿಯಲ್ಲಿನ ಮೂರು ಮಸೂದೆಗಳು ಸುಗ್ರೀವಾಜ್ಞೆಗಳನ್ನು ಬದಲಿಸುವ ಉದ್ದೇಶವನ್ನು ಹೊಂದಿವೆ.
ನಾಳೆ ಸಂಸತ್ತಿನ ಉಭಯ ಸದನಗಳಿಗೆ ಹಾಜರಾಗುವಂತೆ ಕಾಂಗ್ರೆಸ್ ತನ್ನ ಸಂಸದರಿಗೆ ಮೂರು ವಿಪ್ ಜಾರಿ ಮಾಡಿದೆ. ಭಾರತೀಯ ಜನತಾ ಪಕ್ಷವೂ ತನ್ನ ರಾಜ್ಯಸಭಾ ಸಂಸದರಿಗೆ ಮೂರು ವಿಪ್ ಜಾರಿ ಮಾಡಿದೆ. ಸಂಸತ್ತಿನಲ್ಲಿ ಪ್ರಸ್ತಾಪಿಸಬೇಕಾದ ವಿಷಯಗಳ ಬಗ್ಗೆ ಒಮ್ಮತ ಮೂಡಿಸಲು ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ನಾಳೆ ಎಲ್ಲಾ ವಿರೋಧ ಪಕ್ಷಗಳ ಸಭೆ ಕರೆದಿದ್ದಾರೆ. ಚಳಿಗಾಲದ ಅಧಿವೇಶನ ಡಿಸೆಂಬರ್ 23 ರಂದು ಮುಕ್ತಾಯಗೊಳ್ಳಲಿದೆ.