ಗುವಾಹಟಿ: ಅಪಘಾತದ ನಂತರ ಎಎಎಸ್ ಯು ನಾಯಕನನ್ನು ಹೊಡೆದು ಕೊಂದ ಜನ, 6 ಮಂದಿಯ ಬಂಧನ
ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್‌ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು..
Published: 29th November 2021 09:48 PM | Last Updated: 29th November 2021 09:48 PM | A+A A-

ಸಾಂದರ್ಭಿಕ ಚಿತ್ರ
ಗುವಾಹಟಿ: ರಸ್ತೆ ಅಪಘಾತವೊಂದರ ನಂತರ 50ಕ್ಕೂ ಹೆಚ್ಚು ಜನರ ಗುಂಪೊಂದು ನಡೆಸಿದ ದಾಳಿಯಲ್ಲಿ ಆಲ್ ಅಸ್ಸಾಂ ವಿದ್ಯಾರ್ಥಿ ಒಕ್ಕೂಟದ(ಎಎಎಸ್‌ಯು) ಸ್ಥಳೀಯ ಮುಖಂಡರೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಪತ್ರಕರ್ತರು ಸೇರಿದಂತೆ ಇಬ್ಬರು ಗಾಯಗೊಂಡಿದ್ದಾರೆ.
ಅಪಘಾತವೊಂದರಲ್ಲಿ ವ್ಯಕ್ತಿಯೊಬ್ಬರು ಗಾಯಗೊಂಡಿದ್ದು, ನಂತರ ನಡೆದ ದಾಳಿಗೆ ಸಂಬಂಧಿಸಿದಂತೆ ಆರು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.
ನೆರೆಯ ಗೋಲಾಘಾಟ್ ಜಿಲ್ಲೆಯ ದೆರ್ಗಾಂವ್‌ನ ಎಎಎಸ್‌ಯು ನಾಯಕ ಅನಿಮೇಶ್ ಭುಯಾನ್(23) ಅವರು, ಸ್ಥಳೀಯ ಟಿವಿ ಚಾನೆಲ್‌ನಲ್ಲಿ ಕೆಲಸ ಮಾಡುವ ಮೃದುಸ್ಮಂತ ಬರುವಾ ಮತ್ತು ಇನ್ನೊಬ್ಬ ವ್ಯಕ್ತಿಯೊಂದಿಗೆ ಜೋರ್ಹತ್‌ಗೆ ಭೇಟಿ ನೀಡಿದ್ದರು. ಈ ವೇಳೆ ಈ ಮೂವರು ಅಪಘಾತವೊಂದರಲ್ಲಿ ಭಾಗಿಯಾಗಿದ್ದಾರೆ ಎಂಬ ಅನುಮಾನದ ಮೇಲೆ ಅವರ ಜನರ ಗುಂಪು ದಾಳಿ ನಡೆಸಿದೆ.
ದಾಳಿಯಲ್ಲಿ ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಅನಿಮೇಶ್ ಭುಯಾ ಅವರು ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ.
ಘಟನೆಯ ಕುರಿತು ತನಿಖೆ ನಡೆಸುತ್ತಿದ್ದು, ಈಗಾಗಲೇ ಆರು ಮಂದಿಯನ್ನು ಬಂಧಿಸಲಾಗಿದೆ ಮತ್ತು ಘಟನೆಯಲ್ಲಿ ಭಾಗಿಯಾಗಿರುವ ಎಲ್ಲರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ದಾಳಿ ಮಾಡಿದವರನ್ನು ತಕ್ಷಣ ಬಂಧಿಸಬೇಕು ಎಂದು ಎಎಎಸ್ ಯು ಪೊಲೀಸರಿಗೆ 24 ಗಂಟೆಗಳ ಗಡುವು ನೀಡಿದ್ದು, ವಿಫಲವಾದಲ್ಲಿ ಜೋರ್ಹತ್ ಅನ್ನು ಬಂದ್ ಮಾಡುವುದಾಗಿ ಬೆದರಿಕೆ ಹಾಕಿದೆ. ಅಲ್ಲದೆ ರಸ್ತೆ ಅಪಘಾತದ ಘಟನೆಯಲ್ಲಿ ಈ ಮೂವರು ಭಾಗಿಯಾಗಿಲ್ಲ ಎಂದು ವಿದ್ಯಾರ್ಥಿ ಸಂಘಟನೆ ಹೇಳಿದೆ.