ರಾಷ್ಟ್ರ ಪ್ರಶಸ್ತಿ ವಿಜೇತ, ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ನಿಧನ

ಕೊರೋನಾ ಸೋಂಕಿಗೆ ತುತ್ತಾಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ, ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್(73) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ.
ನೃತ್ಯ ನಿರ್ದೇಶಕ ಶಿವಶಂಕರ್
ನೃತ್ಯ ನಿರ್ದೇಶಕ ಶಿವಶಂಕರ್

ಹೈದರಾಬಾದ್: ಕೊರೋನಾ ಸೋಂಕಿಗೆ ತುತ್ತಾಗಿದ್ದ ರಾಷ್ಟ್ರ ಪ್ರಶಸ್ತಿ ವಿಜೇತ, ಖ್ಯಾತ ನೃತ್ಯ ನಿರ್ದೇಶಕ ಶಿವಶಂಕರ್ ಮಾಸ್ಟರ್(73) ಅವರು ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ನಿಧನರಾಗಿದ್ದಾರೆ.

ಹೈದರಾಬಾದ್‌ನ ಗಚ್ಚಿಬೌಲಿ ಎಐಜಿ ಆಸ್ಪತ್ರೆಯಲ್ಲಿ ಕೋವಿಡ್ ಗೆ ಚಿಕಿತ್ಸೆ ಪಡೆಯುತ್ತಿದ್ದ 73 ವರ್ಷದ ಶಿವಶಂಕರ್ ಅವರಿಗೆ ಶ್ವಾಸಕೋಶದಲ್ಲಿ ಸಂಪೂರ್ಣ ಸೋಂಕು ವ್ಯಾಪಿಸಿದ ಕಾರಣ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ಶಿವಶಂಕರ್ ಮಾಸ್ಟರ್ ತೆಲುಗು ಮತ್ತು ತಮಿಳು ಸೇರಿದಂತೆ ವಿವಿಧ ಭಾಷೆಗಳಲ್ಲಿ ಸುಮಾರು 800 ಚಿತ್ರಗಳ ಹಾಡುಗಳಿಗೆ ನೃತ್ಯ ಸಂಯೋಜನೆ ಮಾಡಿದ್ದಾರೆ.

ಮಗಧೀರ ಚಿತ್ರದ ಧೀರ.. ಧೀರ.. ಹಾಡಿನ ನೃತ್ಯ ಸಂಯೋಜನೆಗೆ 2011 ರಲ್ಲಿ ಶಿವಶಂಕರ್ ಮಾಸ್ಟರ್ ಅವರಿಗೆ ರಾಷ್ಟ್ರ ಪ್ರಶಸ್ತಿ ಲಭಿಸಿತ್ತು.

ಶಿವಶಂಕರ್ ಮಾಸ್ಟರ್ ಪತ್ನಿ ಹಾಗೂ ಪುತ್ರನಿಗೂ ಕೋವಿಡ್ ಸೋಂಕು ತಗುಲಿದ್ದು, ಅವರ ಪತ್ನಿ ಮನೆಯಲ್ಲಿ ಕ್ವಾರಂಟೈನ್ ಆಗಿದ್ದರೆ, ಹಿರಿಯ ಪುತ್ರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com