ನಾಳೆ ಲೋಕಸಭೆಯಲ್ಲಿ ಓಮಿಕ್ರಾನ್ ರೂಪಾಂತರಿ ಬಗ್ಗೆ ಚರ್ಚೆ ಸಾಧ್ಯತೆ 

ಸಂಸತ್ ನ ಚಳಿಗಾಲದ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಡಿ.1 ರಂದು ಹೊಸ ಕೋವಿಡ್-19 ರೂಪಾಂತರಿ ವೈರಾಣು ಓಮಿಕ್ರಾನ್ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. 
ಸಂಸತ್ತು
ಸಂಸತ್ತು

ನವದೆಹಲಿ: ಸಂಸತ್ ನ ಚಳಿಗಾಲದ ಅಧಿವೇಶನದ ಲೋಕಸಭೆ ಕಲಾಪದಲ್ಲಿ ಡಿ.1 ರಂದು ಹೊಸ ಕೋವಿಡ್-19 ರೂಪಾಂತರಿ ವೈರಾಣು ಓಮಿಕ್ರಾನ್ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ. 

ರೂಲ್ 193 ಅಡಿಯಲ್ಲಿ ಚರ್ಚೆ ನಡೆಯುವ ಸಾಧ್ಯತೆ ಇದೆ. ಇದಕ್ಕೂ ಮುನ್ನ  ಪ್ರಧಾನಿ ನರೇಂದ್ರ ಮೋದಿ ಚಳಿಗಾಲದ ಅಧಿವೇಶನಕ್ಕೆ ಕಾರ್ಯತಂತ್ರ ರೂಪಿಸುವುದಕ್ಕಾಗಿ ಹಿರಿಯ ಸಚಿವರೊಂದಿಗೆ ಚರ್ಚಿಸಿದ್ದರು. 

ಕೋವಿಡ್-19 ಹೊಸ ತಳಿ ಪತ್ತೆಯಾಗಿದ್ದು ಅದನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ  ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ನ.27 ರಂದು ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದ್ದರು. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com