ಉತ್ತರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಗಾಯದೀನ್ ಅನುರಾಗಿ ಸಮಾಜವಾದಿ ಪಕ್ಷಕ್ಕೆ ಸೇರ್ಪಡೆ

ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಗಾಯದೀನ್ ಅನುರಾಗಿ ಶುಕ್ರವಾರ ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ನಮ್ಮ ಧ್ವನಿಗೆ ಬೆಲೆ ಇರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಕಾಂಗ್ರೆಸ್ ಧ್ವಜದ ಚಿತ್ರ
ಕಾಂಗ್ರೆಸ್ ಧ್ವಜದ ಚಿತ್ರ

ಲಖನೌ: ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಕಾಂಗ್ರೆಸ್ ಉಪಾಧ್ಯಕ್ಷ ಗಾಯದೀನ್ ಅನುರಾಗಿ ಶುಕ್ರವಾರ ಪಕ್ಷ ತೊರೆದು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ನಲ್ಲಿ ನಮ್ಮ ಧ್ವನಿಗೆ ಬೆಲೆ ಇರಲಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಲಖನೌದಲ್ಲಿ ನಡೆದ ಸಮಾರಂಭದಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಖಿಲೇಶ್ ಯಾದವ್ ಅವರ ಸಮ್ಮುಖದಲ್ಲಿ ಅವರು ಸಮಾಜವಾದಿ ಪಕ್ಷಕ್ಕೆ ಸೇರ್ಪಡೆಯಾದರು. ಆಸೆಂಬ್ಲಿ ಚುನಾವಣೆಗಾಗಿ ಐಎಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪಕ್ಷವನ್ನು ಸಜ್ಜುಗೊಳಿಸುವ ಪ್ರಯತ್ನಿಸುತ್ತಿದ್ದರೂ ಹಿರಿಯ ನಾಯಕರು ಪಕ್ಷ ತೊರೆಯುತ್ತಿರುವುದು ಮುಂದುವರೆದಿದೆ. 

ಕಾಂಗ್ರೆಸ್ ಹಿರಿಯ ನಾಯಕರಾಗಿದ್ದ ದಿವಂಗತ ಕಮಲಪತಿ ತ್ರಿಪಾಠಿ ಅವರ ಮೊಮ್ಮಗ ಲಲಿತೇಶ್ ಪತಿ ತ್ರಿಪಾಠಿ ಇತ್ತೀಚಿಗಷ್ಟೇ ಪಕ್ಷ ತೊರೆದಿದ್ದರು. ಕಾಂಗ್ರೆಸ್ ನ ಮಾಜಿ ನಾಯಕ ಜಿತೇಂದ್ರ ಪ್ರಸಾದ್ ಅವರ ಪುತ್ರ, ಕೇಂದ್ರದ ಮಾಜಿ ಸಚಿವ ಜಿತಿನ್ ಪ್ರಸಾದ್ ಬಿಜೆಪಿ ಸೇರಿದ ನತರ ಕಾಂಗ್ರೆಸ್ ಮುಖಂಡರು ಪಕ್ಷ ತೊರೆಯುತ್ತಿರುವುದು ಹೆಚ್ಚಾಗುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com