ಲಕ್ನೋ: ಬಾಲಿವುಡ್ ನಟಿ ಕಂಗನಾ ರಣಾವತ್ ಉತ್ತರ ಪ್ರದೇಶ ಸರ್ಕಾರದ ಒಂದು ಜಿಲ್ಲೆ ಒಂದು ಉತ್ಪಾದನೆ ಕಾರ್ಯಕ್ರಮಕ್ಕೆ ರಾಯಭಾರಿಯಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ.
ಶುಕ್ರವಾರ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ನಟಿ ಕಂಗನಾ ರಮಾವತ್ ಭೇಟಿ ಮಾಡಿದರು. ಉತ್ತರ ಪ್ರದೇಶದ 75 ಜಿಲ್ಲೆಗಳಾದ್ಯಂತ ಸಾಂಪ್ರದಾಯಿಕ ಕೈಗಾರಿಕಾ ಕೇಂದ್ರಗಳನ್ನು ರಚಿಸುವ ಉದ್ದೇಶದಿಂದ ಯುಪಿ ಸರ್ಕಾರವು ಒಂದು ಜಿಲ್ಲೆ-ಒಂದು ಉತ್ಪನ್ನ (ಒಡಿಒಪಿ) ಕಾರ್ಯಕ್ರಮವನ್ನು ಆರಂಭಿಸಿದೆ.
ಒನ್ ಡಿಸ್ಟ್ರಿಕ್ಟ್ ಒನ್ ಪ್ರಾಡಕ್ಟ್ ಯೋಜನೆಗೆ ರಾಯಭಾರಿಯಾಗಿ ಬಾಲಿವುಡ್ ನಟಿ ಕಂಗನಾ ರಣಾವತ್ ನೇಮಕವಾಗಿದ್ದಾರೆ ಎಂದು ಉತ್ತರ ಪ್ರದೇಶದ ಹೆಚ್ಚುವರಿ ಕಾರ್ಯದರ್ಶಿ ನವನೀತ್ ಸಹಗಲ್ ಟ್ವೀಟ್ ಮಾಡಿದ್ದಾರೆ.
ಇನ್ನೂ ಸಿಎಂ ಭೇಟಿ ವೇಳೆ ನಟಿ ಕಂಗನಾ ಯೋಗಿ ಆದಿತ್ಯ ನಾಥ್ ಅವರ ಅಭಿವೃದ್ಧಿ ಕಾರ್ಯಗಳನ್ನು ಹೊಗಳಿದ್ದಾರೆ ಎನ್ನಲಾಗಿದೆ. ರಾಮ ಮಂದಿರ ನಿರ್ಮಾಣದ ಸ್ಥಳಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದ್ದಾರೆ.
Advertisement