ದೇಶದಲ್ಲಿ 90 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ: ಕೇಂದ್ರ ಆರೋಗ್ಯ ಸಚಿವ

ದೇಶದಲ್ಲಿ ಇದುವರೆಗೆ 90 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಶನಿವಾರ ತಿಳಿಸಿದ್ದಾರೆ.
ಮಹಿಳೆಯೊಬ್ಬರಿಗೆ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡುತ್ತಿರುವ ಚಿತ್ರ
ಮಹಿಳೆಯೊಬ್ಬರಿಗೆ ಆರೋಗ್ಯ ಕಾರ್ಯಕರ್ತರು ಲಸಿಕೆ ನೀಡುತ್ತಿರುವ ಚಿತ್ರ

ನವದೆಹಲಿ: ದೇಶದಲ್ಲಿ ಇದುವರೆಗೆ 90 ಕೋಟಿಗೂ ಹೆಚ್ಚು ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ಅವರು ಶನಿವಾರ ತಿಳಿಸಿದ್ದಾರೆ.

"ಶಾಸ್ತ್ರಿ ಜೀ 'ಜೈ ಜವಾನ್ - ಜೈ ಕಿಸಾನ್' ಘೋಷಣೆಯನ್ನು ನೀಡಿದರು. ಪೂಜ್ಯ ಅಟಲ್ ಜೀ ಅವರು 'ಜೈ ವಿಜ್ಞಾನ' ಮತ್ತು ಪ್ರಧಾನಿ ನರೇಂದ್ರ ಮೋದಿ ಜೀ ಅವರು 'ಜೈ ಅನುಸಂಧಾನ್' ಘೋಷಣೆಯನ್ನು ನೀಡಿದರು. ಈ ಕರೋನಾ ಲಸಿಕೆ ಅನುಸಂಧಾನದ ಫಲಿತಾಂಶ. ಜೈ ಅನುಸಂಧನ್" ಎಂದು ಮಾಂಡವಿಯಾ ಅವರು ಟ್ವೀಟ್ ಮಾಡಿದ್ದಾರೆ.

ಜನವರಿ 16 ರಂದು ದೇಶಾದ್ಯಂತ ವ್ಯಾಕ್ಸಿನೇಷನ್ ಅಭಿಯಾನ ಪ್ರಾರಂಭಿಸಲಾಯಿತು. ಮೊದಲ ಹಂತದಲ್ಲಿ ಆರೋಗ್ಯ ಕಾರ್ಯಕರ್ತರಿ(ಎಚ್‌ಸಿಡಬ್ಲ್ಯೂ)ಗೆ ಲಸಿಕೆ ಹಾಕಲಾಯಿತು. ನಂತರ ಫೆಬ್ರವರಿ 2ರಿಂದ 

ಮುಂಚೂಣಿ ಕೆಲಸಗಾರರಿಗೆ(FLWs), ಮಾರ್ಚ್ 1 ರಿಂದ 60 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಹಾಗೂ ಏಪ್ರಿಲ್ 1 ರಿಂದ 45 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲ ಜನರಿಗೆ ಲಸಿಕೆ ನೀಡಲಾಯಿತು.

ಮೇ 1ರಿಂದ 18 ವರ್ಷ ಮೇಲ್ಪಟ್ಟ ಎಲ್ಲರಿಗೂ ಲಸಿಕೆ ಹಾಕಲು ಅವಕಾಶ ನೀಡುವ ಮೂಲಕ ಲಯಸಿಕೆ ಅಭಿಯಾನವನ್ನು ವಿಸ್ತರಿಸಲು ಸರ್ಕಾರ ನಿರ್ಧರಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com