ಮುಂಬೈ: ಕ್ರೂಸ್ ಹಡಗಿನಲ್ಲಿ ರೇವ್ ಪಾರ್ಟಿ ಮೇಲೆ ಎನ್ ಸಿಬಿ ದಾಳಿ, ಶಾರೂಕ್ ಖಾನ್  ಪುತ್ರ ಆರ್ಯನ್ ಖಾನ್ ಸೇರಿ 8 ಮಂದಿ ವಶಕ್ಕೆ 

ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದೆ.
ಶಾರೂಖ್ ಖಾನ್ ಮತ್ತು ಆರ್ಯನ್ ಖಾನ್ (ಸಂಗ್ರಹ ಚಿತ್ರ)
ಶಾರೂಖ್ ಖಾನ್ ಮತ್ತು ಆರ್ಯನ್ ಖಾನ್ (ಸಂಗ್ರಹ ಚಿತ್ರ)

ಮುಂಬೈ: ವಾಣಿಜ್ಯ ನಗರಿ ಮುಂಬೈಯ ಕರಾವಳಿ ತೀರದಲ್ಲಿ ಐಷಾರಾಮಿ ಹಡಗಿನಲ್ಲಿ ಕಳೆದ ರಾತ್ರಿ ರೇವ್ ಪಾರ್ಟಿ ನಡೆಸುತ್ತಿದ್ದವರನ್ನು ಏಕಾಏಕಿ ದಾಳಿ ಮಾಡಿ ಬಂಧಿಸಿರುವ ನಾರ್ಕೊಟಿಕ್ಸ್ ಕ್ರೈಮ್ ಬ್ರ್ಯಾಂಚ್(ಎನ್ ಸಿಬಿ) ಅಧಿಕಾರಿಗಳ ತಂಡ ಬಾಲಿವುಡ್ ಸೂಪರ್ ಸ್ಟಾರ್ ಶಾರೂಕ್ ಖಾನ್ ಪುತ್ರ ಆರ್ಯನ್ ಖಾನ್ ಸೇರಿದಂತೆ 8 ಮಂದಿಯನ್ನು ವಶಕ್ಕೆ ಪಡೆದಿದೆ.

ರೇವ್ ಪಾರ್ಟಿ ನಡೆಯುತ್ತಿದ್ದ ಬಗ್ಗೆ ನಿಖರ ಮಾಹಿತಿ ಪಡೆದು ಏಕಾಏಕಿ ದಾಳಿ ನಡೆಸಿದ ತಂಡ 8 ಮಂದಿಯನ್ನು ವಶಕ್ಕೆ ಪಡೆದಿದ್ದು ಅವರ ಹೆಸರುಗಳನ್ನು ಬಿಡುಗಡೆ ಮಾಡಿದೆ. ಅವರಲ್ಲಿ ಇಬ್ಬರು ಯುವತಿಯರೂ ಸೇರಿದ್ದಾರೆ. ವಶಕ್ಕೆ ಪಡೆದವರ ಹೆಸರುಗಳು ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚ, ನೂಪುರ್ ಸಾರಿಕಾ, ಇಸ್ಮೀತ್ ಸಿಂಗ್, ಮೊಹಕ್ ಜಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ ಆಗಿದ್ದಾರೆ ಎಂದು ಎನ್ ಸಿಬಿ ನಿರ್ದೇಶಕ ಸಮೀರ್ ವಾಂಖೆಡೆ ತಿಳಿಸಿದ್ದಾರೆ.

ವಶಕ್ಕೆ ಪಡೆದವರಿಂದ ಎಂಡಿಎಂಎ, ಎಸ್ಕೆಸಿ, ಕೊಕೈನ್, ಎಂಡಿ ಮತ್ತು ಚರಸ್ ಮಾದಕ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ. ಈ ದಾಳಿ ಕಳೆದ ರಾತ್ರಿ ನಡೆದಿದೆ. ಡ್ರಗ್ಸ್ ಪಾರ್ಟಿಗೆ ಸಂಬಂಧಿಸಿದಂತೆ ಸಂಸ್ಥೆ ಆಯೋಜಕರ ವಿರುದ್ಧ ಎಫ್ ಐಆರ್ ದಾಖಲಿಸಿದೆ.

ಬಾಲಿವುಡ್ ನಂಟು: ಸಮುದ್ರ ಮಧ್ಯೆ ಹಡಗಿನಲ್ಲಿ ನಟರು, ಉದ್ಯಮಿಗಳು ಮತ್ತು ಶ್ರೀಮಂತರ ಮಕ್ಕಳು ಸೇರಿ ಪಾರ್ಟಿ ಮಾಡುತ್ತಿದ್ದಾರೆ ಎಂದು ಎನ್ ಸಿಬಿಗೆ ಮಾಹಿತಿ ಸಿಕ್ಕಿತು. ಅದರ ಜಾಡು ಹಿಡಿದು ಕಳೆದ ಎರಡು ವಾರಗಳಿಂದ ಎನ್ ಸಿಬಿ ತೀವ್ರ ವಿಚಾರಣೆ ನಡೆಸಿ ಜಾಡು ಹಿಡಿದು ಹೊರಟಿತ್ತು. ಇದು ಎರಡು ವಾರಗಳ ನಿರಂತರ ತನಿಖೆಯ ಫಲಿತಾಂಶವಾಗಿದೆ, ನಿಖರ ಆಧಾರ ಸಿಕ್ಕಿಯೇ ನಾವು ದಾಳಿ ಮಾಡಿದ್ದೇವೆ. ಇದರಲ್ಲಿ ಬಾಲಿವುಡ್ ಸಂಪರ್ಕ ಇರುವುದು ಸಹ ಬೆಳಕಿಗೆ ಬಂದಿದೆ ಎಂದು ಎನ್ ಸಿಬಿ ಮುಖ್ಯಸ್ಥ ಎಸ್ ಎನ್ ಪ್ರಧಾನ್ ತಿಳಿಸಿದ್ದಾರೆ.

ಕಾರ್ಯಾಚರಣೆ ವೇಳೆ ಶಂಕಿತರನ್ನು ತೀವ್ರ ಶೋಧ ನಡೆಸಿದಾಗ ವಿವಿಧ ಬಟ್ಟೆಗಳಲ್ಲಿ, ಶೂ, ಒಳ ಉಡುಪುಗಳಲ್ಲಿ ಮಾದಕ ವಸ್ತುಗಳನ್ನು ಅಡಗಿಸಿಟ್ಟಿದ್ದು ಬೆಳಕಿಗೆ ಬಂದು ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದವರನ್ನು ಇಂದು ಅಪರಾಹ್ನ ನ್ಯಾಯಾಲಯ ಮುಂದೆ ಹಾಜರುಪಡಿಸುವ ಸಾಧ್ಯತೆಯಿದ್ದು ಕಾನೂನು ರೀತಿ ರಿವಾಜುಗಳು ನಡೆಯಲಿವೆ. ಇಂದು ಬೆಳಗ್ಗೆ ಮುಂಬೈಯ ಎನ್ ಸಿಬಿ ಕಚೇರಿಯಲ್ಲಿ ವಶಕ್ಕೆ ಪಡೆದವರನ್ನು ತೀವ್ರ ವಿಚಾರಣೆ ನಡೆಸಲಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com