ಒಂದೇ ಖಾಸಗಿ ಶಾಲೆಯಲ್ಲಿ ಕಲಿಯುವ 2 ಸಹೋದರಿಯರ ಪೈಕಿ ಒಬ್ಬರಿಗೆ ಶುಲ್ಕ ಮನ್ನ: ಯುಪಿ ಸರ್ಕಾರದ ಚಿಂತನೆ

ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುವ ಯೋಜನೆಯೊಂದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. 
ಯೋಗಿ ಆದಿತ್ಯನಾಥ್
ಯೋಗಿ ಆದಿತ್ಯನಾಥ್

ಲಖನೌ: ಮಧ್ಯಮ ವರ್ಗದ ಕುಟುಂಬಗಳಿಗೆ ನೆರವಾಗುವ ಯೋಜನೆಯೊಂದನ್ನು ಉತ್ತರ ಪ್ರದೇಶದ ಯೋಗಿ ಆದಿತ್ಯನಾಥ್ ನೇತೃತ್ವದ ಸರ್ಕಾರ ಜಾರಿಗೊಳಿಸಲು ಚಿಂತನೆ ನಡೆಸುತ್ತಿದೆ. 

ಕುಟುಂಬದಲ್ಲಿ ಇಬ್ಬರು ಸಹೋದರಿಯರು ಒಂದೇ ಖಾಸಗಿ ಶಾಲೆ/ ಕಾಲೇಜಿನಲ್ಲಿ ಓದುತ್ತಿದ್ದರೆ ಅವರ ಪೈಕಿ ಒಬ್ಬರಿಗೆ ಮಾತ್ರ ಶುಲ್ಕ ಪಡೆದು ಮತ್ತೊರ್ವ ವಿದ್ಯಾರ್ಥಿನಿಗೆ ಶುಲ್ಕ ಮನ್ನ ಮಾಡುವ ಯೋಜನೆಯನ್ನು ಯೋಗಿ ಆದಿತ್ಯನಾಥ್ ಸರ್ಕಾರ ಪರಿಗಣಿಸುತ್ತಿದೆ.

"ಇದು ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪರಿಗಣಿಸಲಾಗುತ್ತಿರುವ ಯೋಜನೆಯಾಗಿದೆ. ಒಂದೇ ದಂಪತಿಯ ಇಬ್ಬರು ಹೆಣ್ಣುಮಕ್ಕಳು ಒಂದೇ ಶಾಲೆ/ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರೆ ಅವರಲ್ಲಿ ಒಬ್ಬರಿಗೆ ಶುಲ್ಕ ಮನ್ನ ಮನ್ನ ಮಾಡುವುದನ್ನು ಖಾಸಗಿ ಶಾಲೆ/ ಕಾಲೇಜುಗಳು ಪರಿಗಣಿಸಲೇಬೇಕಾಗಿದೆ. ಒಂದು ವೇಳೆ ಪರಿಗಣಿಸದ ಶೈಕ್ಷಣಿಕ ಸಂಸ್ಥೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕು, ಅಂತಹ ಶೈಕ್ಷಣಿಕ ಸಂಸ್ಥೆಗಳಿಗೆ ಸರ್ಕಾರವೇ ಆ ವಿದ್ಯಾರ್ಥಿನಿಯ ಪರವಾಗಿ ಶುಲ್ಕ ಪಾವತಿ ಮಾಡಲಿದೆ ಎಂದು ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

"ಈ ಯೋಜನೆಯಿಂದಾಗಿ ಹೆಣ್ಣುಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ದೊರೆಯಲಿದ್ದು ಪೋಷಕರೂ ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ನೀಡುತ್ತಾರೆ" ಎಂದು ಆದಿತ್ಯನಾಥ್ ಹೇಳಿದ್ದಾರೆ.

"ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಈ ಬಗ್ಗೆ ಮಾತನಾಡಿದ್ದು, ಈ ಯೋಜನೆ ಜಾರಿಯ ವಿಧಾನಗಳೆಡೆಗೆ ಕೆಲಸ ಮಾಡಲಾಗುತ್ತಿದೆ" ಎಂದು ಹೇಳಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com