ಉತ್ತರ ಪ್ರದೇಶ: ಪ್ರತಿಭಟನಾನಿರತ ರೈತರ ಮೇಲೆ ಕಾರುಗಳು ಹರಿದು ಅನೇಕ ಮಂದಿಗೆ ಗಾಯ!
ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.
Published: 03rd October 2021 10:09 PM | Last Updated: 04th October 2021 02:02 PM | A+A A-

ಕಾರು ಹರಿದ ನಂತರ ಗಾಯಗೊಂಡಿರುವ ರೈತರು
ಲಖಿಂಪುರ ಖೇರಿ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಭೇಟಿ ವಿರೋಧಿಸಿ ಭಾನುವಾರ ಪ್ರತಿಭಟನೆ ನಡೆಸುತ್ತಿದ್ದ ಕೃಷಿ ವಿರೋಧಿ ಕಾನೂನು ಪ್ರತಿಭಟನಾಕಾರರ ಗುಂಪೊಂದರ ಮೇಲೆ ಎರಡು ಕಾರನ್ನು ಹರಿಸಿದ ನಂತರ ಹಿಂಸಾಚಾರ ಭುಗಿಲೆದ್ದಿತ್ತು.
ಈ ಘಟನೆಯಿಂದಾಗಿ ಅನೇಕ ಮಂದಿ ರೈತರು ತೀವ್ರ ರೀತಿಯಲ್ಲಿ ಗಾಯಗೊಂಡಿರುವುದಾಗಿ ದೃಢಪಡಿಸದ ವರದಿಗಳು ಹೇಳಿವೆ. ಉದ್ರಿಕ್ತಗೊಂಡ ಪ್ರತಿಭಟನಾಕರರು ಎರಡು ಕಾರುಗಳನ್ನು ತಡೆದು ಬೆಂಕಿ ಹಚ್ಚಿದ್ದಾರೆ. ಈ ಘಟನೆಯಲ್ಲಿ ಅನೇಕ ಪತ್ರಕರ್ತರು ಕೂಡಾ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಈ ಹಿಂಸಾಚಾರ ವರದಿ ಹಿನ್ನೆಲೆಯಲ್ಲಿ ಉಪ ಮುಖ್ಯಮಂತ್ರಿ ಮೌರ್ಯ ಬನ್ಬೀರ್‌ಪುರ ಗ್ರಾಮಕ್ಕೆ ಭೇಟಿ ನೀಡುವುದನ್ನು ರದ್ದುಪಡಿಸಿದ್ದಾರೆ.