ಉತ್ತರ ಪ್ರದೇಶ: ಬಂಧನದ ಬಳಿಕ ಪೊರಕೆ ಹಿಡಿದು ಕಸ ಗುಡಿಸಿದ ಪ್ರಿಯಾಂಕಾ ಗಾಂಧಿ; ವಿಡಿಯೋ ವೈರಲ್
ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿರುವ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.
Published: 04th October 2021 01:58 PM | Last Updated: 04th October 2021 02:07 PM | A+A A-

ಪ್ರಿಯಾಂಕಾ ಗಾಂಧಿ
ನವದೆಹಲಿ: ಉತ್ತರ ಪ್ರದೇಶದ ಸೀತಾಪುರದ ಪಿಎಸಿ ಗೆಸ್ಟ್ ಹೌಸ್ ನಲ್ಲಿರುವ ಪ್ರಿಯಾಂಕಾ ಗಾಂಧಿ ತಮ್ಮ ಕೊಠಡಿಯನ್ನು ಖುದ್ದು ತಾವೇ ಪೊರಕೆ ಹಿಡಿದು ಕಸ ಗುಡಿಸಿರುವ ವಿಡಿಯೋ ವೈರಲ್ ಆಗಿದೆ.
ಉತ್ತರ ಪ್ರದೇಶದ ಲಖೀಂಪುರ ಜಿಲ್ಲೆಯಲ್ಲಿ ನಡೆದ ಹಿಂಸಾಚಾರದ ಸ್ಥಳಕ್ಕೆ ಹೋಗುತ್ತಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರನ್ನು ಅಡ್ಡಗಟ್ಟಿದ್ದ ಪೊಲೀಸರು ಇಂದು ಮುಂಜಾನೆ ಬಂಧಿಸಿದ್ದರು.
ಪೊಲೀಸರ ವಶದಲ್ಲಿರುವ ಪ್ರಿಯಾಂಕಾ ಗಾಂಧಿಗೆ ಗೆಸ್ಟ್ ಹೌಸ್ನಲ್ಲಿ ವಾಸ್ತವ್ಯಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಈ ವೇಳೆ ತಮ್ಮ ಕೊಠಡಿ ಸ್ವಚ್ಛವಿಲ್ಲದ ಕಾರಣ ಪ್ರಿಯಾಂಕಾ ಗಾಂಧಿ ವಾದ್ರಾ ತಾವೇ ಪೊರಕೆ ಹಿಡಿದು ರೂಮನ್ನು ಕ್ಲೀನ್ ಮಾಡಿದ್ದಾರೆ.