ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣ: ಡ್ರಗ್ಸ್ ಪೆಡ್ಲರ್ ಸೇರಿ ಮುಂಬೈ ಎನ್ ಸಿಬಿಯಿಂದ ಮತ್ತಿಬ್ಬರ ಬಂಧನ
ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ-Narcotics Control Bureau) ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Published: 05th October 2021 09:08 AM | Last Updated: 05th October 2021 01:17 PM | A+A A-

ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣ
ಮುಂಬೈ: ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (ಎನ್ ಸಿಬಿ-Narcotics Control Bureau) ಅಧಿಕಾರಿಗಳು ಮತ್ತೆ ಇಬ್ಬರನ್ನು ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ.
Cruise ship raid case | Mumbai Narcotics Control Bureau has arrested two persons- one person who was detained during a raid on the cruise ship for the second day yesterday and a drug peddler from the Jogeshwari area; both arrested persons to be produced before court today
— ANI (@ANI) October 5, 2021
ಮುಂಬೈ ಕ್ರೂಸ್ ಶಿಪ್ ಡ್ರಗ್ಸ್ ಪಾರ್ಟಿ ನಡೆಸುತ್ತಿದ್ದ ವೇಳೆ ವಶಕ್ಕೆ ಪಡೆಯಲಾಗಿದ್ದ ಹಲವರಲ್ಲಿ ಇಂದು ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಅಲ್ಲದೆ ಬಂಧಿತರು ನೀಡಿದ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಎನ್ ಸಿಬಿ ಅಧಿಕಾರಿಗಳು ಮುಂಬೈನ ಜೋಗೇಶ್ವರಿ ಪ್ರದೇಶದ ಓರ್ವ ಡ್ರಗ್ಸ್ ಪೆಡ್ಲರ್ ಅನ್ನೂ ಕೂಡ ಬಂಧಿಸಿದ್ದಾರೆ. ಆ ಮೂಲಕ ಪ್ರಕರಣದಲ್ಲಿನ ಬಂಧಿತರ ಸಂಖ್ಯೆ 11ಕ್ಕೆ ಏರಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಮುಂಬೈ ಕ್ರೂಸ್ ರೇವ್ ಪಾರ್ಟಿ: ಯಾರು ಈ ಎನ್ ಸಿಬಿ ಅಧಿಕಾರಿ ಸಮೀರ್ ವಾಂಖೆಡೆ?
ಬಂಧಿತ ಇಬ್ಬರನ್ನೂ ಇಂದು ಅಧಿಕಾರಿಗಳು ನ್ಯಾಯಾಲಯದ ಮುಂದೆ ಹಾಜರುಪಡಿಸಿ ವಶಕ್ಕೆ ಪಡೆಯುವ ಸಾಧ್ಯತೆ ಇದೆ.
ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ
ಇನ್ನು ಇದೇ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ ಇತರೆ ಇಬ್ಬರನ್ನು ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ ನೀಡಿ ನ್ಯಾಯಾಲಯ ಆದೇಶಿಸಿದೆ. ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ ಅವರ ಪುತ್ರ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ಅಕ್ಟೋಬರ್ 7ರ ವರೆಗೆ ಎನ್ ಸಿಬಿ ವಶಕ್ಕೆ ನೀಡಲಾಗಿದೆ.
ಇದನ್ನೂ ಓದಿ: ಡ್ರಗ್ಸ್ ಪ್ರಕರಣ: ಶಾರುಖ್ ಖಾನ್ ಪುತ್ರ, ಇತರ ಇಬ್ಬರು ಅಕ್ಟೋಬರ್ 7 ರವರೆಗೆ ಎನ್ ಸಿಬಿ ವಶಕ್ಕೆ
ಡ್ರಗ್ಸ್ ಪ್ರಕರಣ ಸಂಬಂಧ ಬಂಧಿತ ಎಲ್ಲಾ ಎಂಟು ಆರೋಪಿಗಳ ವೈದ್ಯಕೀಯ ಪರೀಕ್ಷೆಯ ನಂತರ ಸೋಮವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು. ಆರೋಪಿಗಳ ವಿಚಾರಣೆ ನಡೆಸಿದ ಕೋರ್ಟ್, ಹೆಚ್ಚಿನ ವಿಚಾರಣೆಗಾಗಿ ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್ ಮತ್ತು ಮುನ್ಮುನ್ ಧಮೇಚಾ ಅವರನ್ನು ಅಕ್ಟೋಬರ್ 7ರ ವರೆಗೆ ಎನ್ ಸಿಬಿ ವಶಕ್ಕೆ ನೀಡಿದೆ.