ಬೆಂಗಳೂರು ಸೇರಿದಂತೆ ದೇಶದ  ಪ್ರಮುಖ ಮಹಾ ನಗರಗಳಲ್ಲಿ ನೂರರ ಗಡಿ ದಾಟಿದ ಪೆಟ್ರೋಲ್ ಬೆಲೆ

ಬೆಂಗಳೂರು ಸೇರಿದಂತೆ  ದೇಶದ ನಾಲ್ಕು ಪ್ರಮುಖ ಮಹಾನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ  ಪೆಟ್ರೋಲ್ ದರ 100 ರೂಪಾಯಿ ದಾಟಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಪೆಟ್ರೋಲ್ ಹಾಗೂ ಡೀಸೆಲ್ ದರ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದ್ದು, ಜನಸಾಮಾನ್ಯರಿಗೆ ಹೊರೆಯಾಗುತ್ತಿದೆ. ಬೆಂಗಳೂರು ಸೇರಿದಂತೆ  ದೇಶದ  ಪ್ರಮುಖ ಮಹಾನಗರಗಳಾದ ದೆಹಲಿ, ಮುಂಬೈ, ಚೆನ್ನೈ ಮತ್ತು ಕೊಲ್ಕತ್ತಾದಲ್ಲಿ  ಪೆಟ್ರೋಲ್ ದರ 100 ರೂಪಾಯಿ ದಾಟಿದೆ.

ದೆಹಲಿಯಲ್ಲಿ ಲೀಟರ್ ಪೆಟ್ರೋಲ್ ದರ ರೂ. 102.64 ಪೈಸೆ ಇದ್ದರೆ, ಡೀಸೆಲ್ ಬೆಲೆ  ರೂ. 73.87 ಪೈಸೆಯಷ್ಟಿದೆ. ಮುಂಬೈನಲ್ಲಿ ಪೆಟ್ರೋಲ್ ಬೆಲೆ ರೂ. 108. 67 ಪೈಸೆಯಿದ್ದರೆ ಡೀಸೆಲ್ ಬೆಲೆ  ರೂ. 80.51 ಪೈಸೆಯಷ್ಟಿದೆ.  ಚೆನ್ನೈನಲ್ಲಿ ಪೆಟ್ರೋಲ್ ಬೆಲೆ ರೂ. 100. 36 ಪೈಸೆಯಿದೆ. ಕೊಲ್ಕತ್ತಾದಲ್ಲಿ ಪೆಟ್ರೋಲ್ ಬೆಲೆ ರೂ. 103.36 ಪೈಸೆಯಷ್ಟಿದೆ.

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಲೀಟರ್  ಪೆಟ್ರೋಲ್ ಬೆಲೆ ರೂ. 106 .21 ಪೈಸೆಯಿದ್ದರೆ, ಲೀಟರ್  ಡೀಸೆಲ್ ಬೆಲೆ ರೂ. 96.66 ಪೈಸೆಯಷ್ಟಿದೆ. ಇದರಿಂದಾಗಿ ಗ್ರಾಹಕರು ಹೈರಾಣಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com