ಲಖಿಂಪುರ್ ಹಿಂಸಾಚಾರ ಘಟನೆ: ಅಮಿತ್ ಶಾ'ರನ್ನು ಭೇಟಿ ಮಾಡಲಿರುವ ಪಂಜಾಬ್ ಸಿಎಂ ಛನ್ನಿ
ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ.
Published: 05th October 2021 12:13 PM | Last Updated: 05th October 2021 12:13 PM | A+A A-

ಪಂಜಾಬ್ ಸಿಎಂ ಚನ್ನಿ
ನವದೆಹಲಿ: ಪಂಜಾಬ್ ಸಿಎಂ ಚರಣ್ ಜೀತ್ ಸಿಂಗ್ ಛನ್ನಿ ಉತ್ತರ ಪ್ರದೇಶದ ಲಖಿಂಪುರ ಖೇರಿ ಘಟನೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಅ.05 ರಂದು ಭೇಟಿ ಮಾಡುವ ಸಾಧ್ಯತೆ ಇದೆ.
ಸಂಜೆ 6 ಗಂಟೆಗೆ ಅಮಿತ್ ಶಾ ಅವರನ್ನು ಪಂಜಾಬ್ ಸಿಎಂ ಭೇಟಿ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದಕ್ಕೂ ಮುನ್ನ ಅ.04 ರಂದು ಸಿಎಂ ಛನ್ನಿ ಪಂಜಾಬ್ ರಾಜ್ಯಪಾಲ ಹಾಗೂ ಚಂಡೀಗಢದ ಆಡಳಿತಗಾರ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ಲಖಿಂಪುರದ ಸಂತ್ರಸ್ತರಿಗೆ ನ್ಯಾಯ ಒದಗಿಸುವಂತೆ ವಿವರವಾದ ಮನವಿ ಸಲ್ಲಿಸಿದ್ದರು ಹಾಗೂ ತುರ್ತಾಗಿ ಕೃಷಿ ಕಾನೂನನ್ನು ವಾಪಸ್ ಪಡೆಯುವಂತೆ ಮನವಿ ಮಾಡಿದ್ದರು.
ಸಿಎಂ ಛನ್ನಿ ರಾಜ್ಯಪಾಲರಿಗೆ ಸಲ್ಲಿಸಲಾಗಿದ್ದ ಮನವಿಯ ನಕಲನ್ನು ಪ್ರಧಾನಿ ಮೋದಿ ಅವರಿಗೂ ಕಳಿಸಲಾಗಿದೆ.
ಅ.2 ರಂದು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಿಎಂ ಆದ ಬಳಿಕ ಮೊದಲ ಬಾರಿಗೆ ಛನ್ನಿ ಭೇಟಿ ಮಾಡಿದ್ದರು.