ಲಖೀಂಪುರ್ ಹಿಂಸಾಚಾರ: ಗುರುವಾರ ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ

ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. 
ಸುಪ್ರೀಂಕೋರ್ಟ್
ಸುಪ್ರೀಂಕೋರ್ಟ್

ನವದೆಹಲಿ: ಲಖೀಂಪುರ್ ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ನಲ್ಲಿ ಗುರುವಾರ ವಿಚಾರಣೆ ನಡೆಯಲಿದೆ. ಗುರುವಾರ ಬೆಳಗ್ಗೆ 11 ಗಂಟೆಗೆ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಪೀಠ ವಿಚಾರಣೆ ನಡೆಸಲಿದೆ. ಉತ್ತರ ಪ್ರದೇಶದ ಲಖೀಂಪುರ್ - ಖೇರ್ ಹಿಂಸಾಚಾರ ಘಟನೆ ಸಂಬಂಧ ಸುಪ್ರೀಂ ಕೋರ್ಟ್ ಬುಧವಾರ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡಿತ್ತು. 

ಲಖೀಂಪುರ್ ಖೇರ್ ನಲ್ಲಿ ಭಾನುವಾರ ಸಂಭವಿಸಿದ ಹಿಂಸಾಚಾರದಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿ ಮೃತಪಟ್ಟಿದ್ದರು. ಕೇಂದ್ರ ಸಚಿವರ ಪುತ್ರನೊಬ್ಬ ಇದರಲ್ಲಿ ತೊಡಗಿಸಿಕೊಂಡಿರುವುದಾಗಿ ಆರೋಪಿಸಿ ಪ್ರತಿಪಕ್ಷಗಳು ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿವೆ.

ಲಖೀಂಪುರ್- ಖೇರ್ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐನಿಂದ ತನಿಖೆ ನಡೆಸಬೇಕೆಂದು ಕೋರಿ ಉತ್ತರ ಪ್ರದೇಶದ ವಕೀಲರೊಬ್ಬರು ಮುಖ್ಯ ನ್ಯಾಯಾಧೀಶರ ಬಳಿ ಮಂಗಳವಾರ ಕೋರಿದ್ದರು.  

ಭಾನುವಾರ ನಡೆದ ಘಟನೆಯಲ್ಲಿ ಭಾಗಿಯಾದ ಸಚಿವರಿಗೆ ಶಿಕ್ಷೆಯಾಗುವಂತೆ ಹಾಗೂ ಪ್ರಥಮ ಮಾಹಿತಿ ವರದಿ ದಾಖಲಿಸುವಂತೆ ಗೃಹ ಸಚಿವಾಲಯಕ್ಕೆ ನಿರ್ದೇಶನ ನೀಡುವಂತೆ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ಅವರ ಬಳಿ ವಕೀಲರು ಮನವಿ ಮಾಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com