ರೈತರ ವಿರುದ್ಧ ಏಕೆ ಅಷ್ಟೊಂದು ದ್ವೇಷ?: ಲಖಿಂಪುರ್ ಖೇರಿ ಘಟನೆ ಕುರಿತು ಪ್ರಧಾನಿ ಮೋದಿಗೆ ಕೇಜ್ರಿವಾಲ್ ಪ್ರಶ್ನೆ
ನವದೆಹಲಿ: ನಾಲ್ವರು ರೈತರು ಸೇರಿದಂತೆ 8 ಮಂದಿಯನ್ನು ಬಲಿ ಪಡೆದ ಉತ್ತರ ಪ್ರದೇಶದ ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ನಿಮಗೆ ರೈತರ ವಿರುದ್ಧ ಏಕೆ ಅಷ್ಟೊಂದು ದ್ವೇಷ? ಎಂದು ಬುಧವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಪ್ರಶ್ನಿಸಿದ್ದಾರೆ.
ಸಂತ್ರಸ್ತ ಕುಟುಂಬಗಳಿಗೆ ನ್ಯಾಯ ದೊರಕಿಸಿಕೊಡುವಂತೆ ಪ್ರಧಾನಿ ಮೋದಿಗೆ ಒತ್ತಾಯಿಸಿರುವ ದೆಹಲಿ ಸಿಎಂ, ಈ ಪ್ರಕರಣದ ಆರೋಪಿಗಳನ್ನು ತಕ್ಷಣ ಬಂಧಿಸಬೇಕು ಮತ್ತು ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದ್ದಾರೆ.
ವರ್ಚುವಲ್ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಎಎಪಿ ನಾಯಕ, "ಇಡೀ ವ್ಯವಸ್ಥೆ" ರೈತರ ಕೊಲೆಗಾರರನ್ನು ರಕ್ಷಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೂ ಯಾರನ್ನೂ ಏಕೆ ಬಂಧಿಸಿಲ್ಲ? "ಕಳೆದ ಒಂದು ವರ್ಷದಿಂದ ರೈತರು ಧರಣಿ ನಡೆಸುತ್ತಿದ್ದಾರೆ. ಇಲ್ಲಿಯವರೆಗೆ 600ಕ್ಕೂ ಹೆಚ್ಚು ರೈತರು ಸಾವನ್ನಪ್ಪಿದ್ದಾರೆ. ಈಗ ರೈತರನ್ನು ಚಕ್ರದ ಕೆಳಗೆ ಹಾಕಿ ಕೊಚ್ಚಿ ಕೊಲ್ಲಲಾಯಿತು ಮತ್ತು ಕೊಲ್ಲಲಾಗುತ್ತಿದೆ. ನಿಮಗೆ ರೈತರ ಮೇಲೆ ಏಕೆ ಅಷ್ಟೊಂದು ದ್ವೇಷ? ಎಂದು ಪ್ರಧಾನಿಯನ್ನು ಪ್ರಶ್ನಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ