ಔರಂಗಾಬಾದ್: ರೈಲಿನಲ್ಲಿ ಮಹಿಳೆಗೆ ಕಿರುಕುಳ ನೀಡಿದ ಎನ್‌ಸಿಬಿ ಅಧಿಕಾರಿ ಬಂಧನ

ರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ), ಮುಂಬೈ ಶಾಖೆಯ 34 ವರ್ಷದ ಅಧಿಕಾರಿಯನ್ನು ಪಾರ್ಲಿ ರೈಲ್ವೇ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಔರಂಗಾಬಾದ್: ರೈಲಿನಲ್ಲಿ 25 ವರ್ಷದ ಮಹಿಳೆಗೆ ಕಿರುಕುಳ ನೀಡಿದ ಆರೋಪದ ಮೇಲೆ ನಾರ್ಕೋಟಿಕ್ಸ್​ ಕಂಟ್ರೋಲ್ ಬ್ಯೂರೋ(ಎನ್‌ಸಿಬಿ), ಮುಂಬೈ ಶಾಖೆಯ 34 ವರ್ಷದ ಅಧಿಕಾರಿಯನ್ನು ಪಾರ್ಲಿ ರೈಲ್ವೇ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ ಎಂದು ಔರಂಗಾಬಾದ್ ಸರ್ಕಾರಿ ರೈಲ್ವೆ ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಆರೋಪಿಯನ್ನು ಎನ್‌ಸಿಬಿಯಲ್ಲಿ ಎಸ್‌ಪಿ ಶ್ರೇಣಿಯ ಅಧಿಕಾರಿ ದಿನೇಶ್ ಚವಾಣ್ ಎಂದು ಗುರುತಿಸಲಾಗಿದೆ.

ದೂರಿನ ಪ್ರಕಾರ, ಸಂತ್ರಸ್ತ ಮಹಿಳೆ ಮತ್ತು ಆರೋಪಿ ಒಂದೇ ರೈಲಿನಲ್ಲಿ ಪುಣೆಯಿಂದ ಹೈದರಾಬಾದ್ ಗೆ ಪ್ರಯಾಣಿಸುತ್ತಿದ್ದರು. ನ್ಯಾಯಾಲಯದ ವಿಚಾರಣೆಗಾಗಿ ಆರೋಪಿ ಹೈದರಾಬಾದ್‌ಗೆ ಪ್ರಯಾಣಿಸುತ್ತಿದ್ದರು. 

ಈ ವೇಳೆ ಚವಾಣ್ ತನ್ನನ್ನು ಅನುಚಿತವಾಗಿ ಮುಟ್ಟಿದ್ದಾರೆ ಮತ್ತು ತನ್ನ ಬ್ಯಾಗಿನಿಂದ ಒಳ ಉಡುಪುಗಳನ್ನು ತೆಗೆದರು ಮತ್ತು ಅವುಗಳನ್ನು ತನ್ನ ಎದೆಯ ಮೇಲೆ ಇಟ್ಟಿದ್ದಾನೆ ಎಂದು ಆರೋಪಿಸಿರುವುದಾಗಿ ಎಂದು ಜಿಆರ್‌ಪಿ ಔರಂಗಾಬಾದ್ ಪೊಲೀಸ್ ವರಿಷ್ಠಾಧಿಕಾರಿ ಎಂ ಪಾಟೀಲ್ ಅವರು ತಿಳಿಸಿದ್ದಾರೆ.

ಎನ್ ಸಿಬಿ ಅಧಿಕಾರಿ ವಿರುದ್ಧ ಭಾರತೀಯ ದಂಡ ಸಂಹಿತೆಯ(ಐಪಿಸಿ)ಕಲಂ 354(ಎ) (ಲೈಂಗಿಕ ಕಿರುಕುಳ) ಮತ್ತು 509 (ಮಹಿಳೆಯನ್ನು ಅವಮಾನಿಸುವ ಉದ್ದೇಶದ ಪದ) ಅಡಿ ಕೇಸ್ ದಾಖಲಿಸಲಾಗಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com