ಕೋವಿಡ್-19: ದೇಶಾದ್ಯಂತ 21,257 ಹೊಸ ಸೋಂಕು ಪ್ರಕರಣ, 205 ದಿನಗಳಲ್ಲೇ ಅತಿಕಡಿಮೆ
ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
Published: 08th October 2021 10:39 AM | Last Updated: 08th October 2021 01:27 PM | A+A A-

ಸಾಂದರ್ಭಿಕ ಚಿತ್ರ
ನವದೆಹಲಿ: ದೇಶದಲ್ಲಿನ ಮಾರಕ ಕೊರೋನಾ ಸಾಂಕ್ರಾಮಿಕ ಕ್ರಮೇಣ ಇಳಿಕೆಯಾಗುತ್ತಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ.
India reports 21,257 fresh infections in the last 24 hours, active caseload at 2,40,221; lowest in 205 days: Ministry of Health and Family Welfare pic.twitter.com/QrQpMyee8N
— ANI (@ANI) October 8, 2021
ಈ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ದೇಶಾದ್ಯಂತ 21,257 ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ ಪ್ರಸ್ತುತ ದೇಶದಲ್ಲಿನ ಸಕ್ರಿಯ ಪ್ರಕರಣಗಳ ಪ್ರಮಾಣ ಶೇ.1ಕ್ಕಿಂತ ಕಡಿಮೆ ಅಂದರೆ ಶೇ.0.71 ಇದು 2020ರ ಮಾರ್ಚ್ ತಿಂಗಳಲ್ಲಿ ದಾಖಲಾದ ಪ್ರಮಾಣಕ್ಕಿಂತ ಕಡಿಮೆ ಎನ್ನಲಾಗಿದೆ.
COVID-19 Testing Update. For more details visit: https://t.co/dI1pqvXAsZ @MoHFW_INDIA @DeptHealthRes @PIB_India @mygovindia @COVIDNewsByMIB #ICMRFIGHTSCOVID19 #IndiaFightsCOVID19 #CoronaUpdatesInIndia #COVID19 #Unite2FightCorona pic.twitter.com/oMc4IHbYpa
— ICMR (@ICMRDELHI) October 8, 2021
ಪ್ರಸ್ತುತ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2, 40, 221ಕ್ಕೆ ಕುಸಿದಿದ್ದು, ಇದು ಕಳೆದ 205 ದಿನಗಳಲ್ಲೇ ಕಡಿಮೆ ಎನ್ನಲಾಗಿದೆ. ಇನ್ನು ಚೇತರಿಕೆ ಪ್ರಮಾಣ ಶೇ.97.96ಕ್ಕೆ ಏರಿಕೆಯಾಗಿದ್ದು, ಇದು 2020 ಮಾರ್ಚ್ ತಿಂಗಳ ಬಳಿಕ ದಾಖಲಾದ ಗರಿಷ್ಠ ಪ್ರಮಾಣವಾಗಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 24, 963 ಸೋಂಕಿತರು ಚೇತರಿಸಿಕೊಂಡಿದ್ದು, ಆ ಮೂಲಕ ದೇಶದಲ್ಲಿನ ಒಟ್ಟಾರೆ ಚೇತರಿಕೆ ಪ್ರಮಾಣ 3, 32, 25, 221ಕ್ಕೆ ಏರಿಕೆಯಾಗಿದೆ.