ಲಖಿಂಪುರ್ ಖೇರಿ ಕೇಸ್, ಸಿಬಿಐಗೆ ವರ್ಗಾಯಿಸುವುದು ಪರಿಹಾರವಾಗದಿರಬಹುದು: ಸುಪ್ರೀಂ

ಲಖೀಂಪುರ್ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಈ ಪ್ರಕರಣದಲ್ಲಿ ಈವರೆಗೂ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ. 
ಲಖೀಂಪುರ- ಖೇರ್ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಯ ಚಿತ್ರ
ಲಖೀಂಪುರ- ಖೇರ್ ಹಿಂಸಾಚಾರದಲ್ಲಿ ಮೃತಪಟ್ಟ ವ್ಯಕ್ತಿಯ ಚಿತ್ರ
Updated on

ನವದೆಹಲಿ: ಲಖೀಂಪುರ್ ಖೇರಿಯಲ್ಲಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಈ ಪ್ರಕರಣದಲ್ಲಿ ಈವರೆಗೂ ಉತ್ತರ ಪ್ರದೇಶ ಸರ್ಕಾರ ಕೈಗೊಂಡ ಕ್ರಮಗಳ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದೆ. 

ಈ ಪ್ರಕರಣದಲ್ಲಿ ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಮತ್ತಿತರರ  ವಿರುದ್ಧ ಎಫ್ ಐ ಆರ್ ದಾಖಲಾಗಿದ್ದು, ಆತನ ವಿರುದ್ಧ ಕ್ರಮ ಕೈಗೊಳ್ಳಲು ಉತ್ತರ ಪ್ರದೇಶ ಪೊಲೀಸರ ಮೃಧು ನಿಲುವು ಆರೋಪ  ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ಪೀಠದ ಮುಂದೆ ಬಂದಿತು.

ಬೇರೆ ಯಾವುದೇ ಏಜೆನ್ಸಿಯಿಂದ ತನಿಖೆ ನಡೆಸುವ ಪರ್ಯಾಯವನ್ನು ಪರಿಗಣಿಸಲು ರಾಜ್ಯವನ್ನು ಕೇಳಿದ ಪೀಠ, ತನಿಖೆಯನ್ನು ಕೇಂದ್ರ ಏಜೆನ್ಸಿಗೆ ವರ್ಗಾಯಿಸುವುದರ ವಿರುದ್ಧ ಮೌಖಿಕವಾಗಿ ಹೇಳಿತು.

ಹರೀಶ್ ಸಾಳ್ವೆ ಅವರೇ, ನಿಮ್ಮ ಬಗ್ಗೆ ನಮಗೆ ಗೌರವವಿದೆ.  ರಾಜ್ಯ ಅಗತ್ಯ ಕ್ರಮ ತೆಗೆದುಕೊಳ್ಳುವ ವಿಶ್ವಾಸವಿದೆ.  ಇದು ಸೂಕ್ಷ್ಮ ವಿಚಾರವಾಗಿರುವುದರಿಂದ ನಾವು ಯಾವುದೇ ಹೇಳಿಕೆ ನೀಡುವುದಿಲ್ಲ ಎರಡನೇಯದಾಗಿ ಸಿಬಿಐ ಕೂಡಾ ಪರಿಹಾರವಲ್ಲ, ಸಿಬಿಐ ನಲ್ಲಿಯೂ ನಮಗೆ ಆಸಕ್ತಿ ಇಲ್ಲ, ಆದ್ದರಿಂದ ನೀವು ಬೇರೆ ಪರ್ಯಾಯ ಮಾರ್ಗ ಹುಡುಕಿ, ರಜೆಯ ನಂತರ ನಾವು ಅದನ್ನು ತೆಗೆದುಕೊಳ್ಳುತ್ತೇವೆ ಎಂದು ನ್ಯಾಯಮೂರ್ತಿಗಳಾದ ಸೂರ್ಯ ಕಾಂತ್ ಮತ್ತು ಹಿಮಾ ಕೊಹ್ಲಿ ಅವರನ್ನೊಳಗೊಂಡ ನ್ಯಾಯಪೀಠ ಹೇಳಿತು. 

ಈ ಪ್ರಕರಣವನ್ನು ಸಿಬಿಐಗೆ ವಹಿಸಲು ರಾಜ್ಯ ಸರ್ಕಾರದಿಂದ ಮನವಿ ಮಾಡಲಾಗಿದಯೇ ಎಂಬುದನ್ನು ಉತ್ತರ ಪ್ರದೇಶ ಸರ್ಕಾರದ ಪರವಾಗಿ ಹಾಜರಾಗಿದ್ದ ಹರೀಶ್ ಸಾಲ್ವೆ ಅವರನ್ನು ಪೀಠ ಕೇಳಿತು. ಅಂತಹ ಯಾವುದೇ ಮನವಿ ಬಂದಿಲ್ಲ, ಅದರ ಬಗ್ಗೆ ನ್ಯಾಯಾಲಯವೇ ತೀರ್ಮಾನ ಕೈಗೊಳ್ಳಬೇಕು, ಪ್ರಕರಣದ ತನಿಖಾ ಪ್ರಗತಿ ಬಗ್ಗೆ ಆತೃಪ್ತಿ ಇದ್ದರೆ ಸಿಬಿಐಗೆ ನೀಡಬಹುದು ಎಂದು ಹಿರಿಯ ವಕೀಲರು ಹೇಳಿದರು. ಆದಾಗ್ಯೂ, ಸಿಬಿಐ ತನಿಖೆಗೆ ಪರಿಹಾರವಲ್ಲ ಎಂದು ನ್ಯಾಯಪೀಠ ಹೇಳಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com