ಫೋನ್ ಕದ್ದಾಲಿಕೆ, ಮಾಹಿತಿ ಸೋರಿಕೆ ಪ್ರಕರಣ: ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್‌ಗೆ ಮುಂಬೈ ಪೊಲೀಸ್ ಸಮನ್ಸ್!

ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ.
ಸುಬೋಧ್ ಜೈಸ್ವಾಲ್
ಸುಬೋಧ್ ಜೈಸ್ವಾಲ್

ಮುಂಬೈ: ಮಹಾರಾಷ್ಟ್ರದ ಗುಪ್ತಚರ ಇಲಾಖೆಯ ವರ್ಗಾವಣೆ ಮತ್ತು ಪೋಸ್ಟಿಂಗ್‌ಗಳ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ನಿರ್ದೇಶಕ ಸುಬೋಧ್ ಜೈಸ್ವಾಲ್ ಅವರಿಗೆ ಮುಂಬೈ ಪೊಲೀಸರ ಸೈಬರ್ ಸೆಲ್ ಸಮನ್ಸ್ ನೀಡಿದೆ. 

ಸುಬೋಧ್ ಜೈಸ್ವಾಲ್ ಅವರಿಗೆ ಸಮನ್ಸ್ ಅನ್ನು ಇ-ಮೇಲ್ ಮೂಲಕ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂದಿನ ಗುರುವಾರ ಅಂದರೆ ಅಕ್ಟೋಬರ್ 14 ರಂದು ಹಾಜರಾಗುವಂತೆ ಅವರಿಗೆ ಸೂಚಿಸಲಾಗಿದೆ. ಅವರು ತಮ್ಮ ಹೇಳಿಕೆಗಳನ್ನು ಸೈಬರ್ ಸೆಲ್‌ನಲ್ಲಿ ದಾಖಲಿಸಬೇಕು.  

ಈ ಪ್ರಕರಣವು ಐಪಿಎಸ್ ಅಧಿಕಾರಿ ರಶ್ಮಿ ಶುಕ್ಲಾ ಅವರು ಮಹಾರಾಷ್ಟ್ರದಲ್ಲಿ ಪೋಲಿಸ್ ವರ್ಗಾವಣೆಯಲ್ಲಿ ಭ್ರಷ್ಟಾಚಾರದ ಆರೋಪದ ಬಗ್ಗೆ ಸಿದ್ಧಪಡಿಸಿದ ವರದಿಯ 'ಸೋರಿಕೆ'ಗೆ ಸಂಬಂಧಿಸಿದ್ದಾಗಿದೆ. ಈ ಅವಧಿಯಲ್ಲಿ ಜೈಸ್ವಾಲ್ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಾಗಿದ್ದರು. ತನಿಖೆಯ ಸಮಯದಲ್ಲಿ, ಹಿರಿಯ ನಾಯಕರು ಮತ್ತು ಅಧಿಕಾರಿಗಳ ಫೋನ್ಗಳನ್ನು ಅಕ್ರಮವಾಗಿ ಕದ್ದಾಲಿಕೆ ಮಾಡಲಾಗಿದೆ ಮತ್ತು ಉದ್ದೇಶಪೂರ್ವಕವಾಗಿ ವರದಿಗಳನ್ನು ಸೋರಿಕೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ಆದರೆ ಸೈಬರ್ ಸೆಲ್ ಈ ಬಗ್ಗೆ ದಾಖಲಿಸಿರುವ ಎಫ್‌ಐಆರ್‌ನಲ್ಲಿ ಶುಕ್ಲಾ ಅಥವಾ ಇತರ ಯಾವುದೇ ಅಧಿಕಾರಿಯ ಹೆಸರಿಲ್ಲ.

ಮಹಾರಾಷ್ಟ್ರ ಕೇಡರ್‌ನ 1985ನೇ ಬ್ಯಾಚ್‌ನ ಐಪಿಎಸ್ ಅಧಿಕಾರಿಯಾಗಿರುವ ಜೈಸ್ವಾಲ್, ಈ ವರ್ಷದ ಮೇನಲ್ಲಿ ಎರಡು ವರ್ಷಗಳ ಅವಧಿಗೆ ಕೇಂದ್ರೀಯ ತನಿಖಾ ದಳದ(ಸಿಬಿಐ) ಮುಖ್ಯಸ್ಥರಾಗಿ ನೇಮಕಗೊಂಡರು.

ಈ ವಿಷಯದಿಂದ ರಾಜಕೀಯ ವಿವಾದ ಆರಂಭವಾಗಿತ್ತು. ಇನ್ನು ಬಾಂಬೆ ಹೈಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸುತ್ತಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com