ರೈತರ ಹತ್ಯೆ, ಹಣದುಬ್ಬರ, ನಿರುದ್ಯೋಗದ ಬಗ್ಗೆ ಮೋದಿ ಮೌನ: ರಾಹುಲ್ 

ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಖೀಂಪುರ್ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರು, ರೈತರ ಹತ್ಯೆ, ಹಣದುಬ್ಬರ ಹಾಗೂ ತೈಲ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ  ಪ್ರಧಾನಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾನುವಾರ ವಾಗ್ದಾಳಿ ನಡೆಸಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ಲಖೀಂಪುರ್ ಖೇರಿಯಲ್ಲಿ ಬಿಜೆಪಿ ಕಾರ್ಯಕರ್ತರು, ರೈತರ ಹತ್ಯೆ, ಹಣದುಬ್ಬರ ಹಾಗೂ ತೈಲ ಬೆಲೆ ಏರಿಕೆ, ನಿರುದ್ಯೋಗ ಬಗ್ಗೆ  ಪ್ರಧಾನಿ ಮಾತನಾಡುತ್ತಿಲ್ಲ ಎಂದು ಆರೋಪಿಸಿದ್ದಾರೆ. 

ಹಣದುಬ್ಬರ, ತೈಲ ಬೆಲೆ, ನಿರುದ್ಯೋಗ ಮತ್ತು ರೈತರು, ಬಿಜೆಪಿ ಹತ್ಯೆ ಕುರಿತು ಮೌನವಾಗಿರುವ ಪ್ರಧಾನಿ, ಕ್ಯಾಮೆರಾ ಮತ್ತು ಫೋಟೋ ಆಪ್‌ಗಳ ಕೊರತೆ, ನಿಜವಾದ ಟೀಕೆ, ಸ್ನೇಹಿತರ ಪ್ರಶ್ನೆಗಳಿಗೆ ವೈಲೆಂಟ್ ಆಗುತ್ತಿದ್ದಾರೆ ಎಂದು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ.

ಲಖೀಂಪುರ್ ಖೇರಿಯಲ್ಲಿ ಅಕ್ಟೋಬರ್ 3 ರಂದು ಕೇಂದ್ರ ಗೃಹ ವ್ಯವಹಾರಗಳ ಸಚಿವ ಅಜಯ್ ಮಿಶ್ರಾ ಅವರ ಮಗ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿದ್ದಾಗಿ ರೈತರು ಆರೋಪಿಸುತ್ತಿದ್ದಾರೆ. ಆದಾಗ್ಯೂ, ರೈತರ ಆರೋಪವನ್ನು ತಳ್ಳಿ ಹಾಕಿರುವ ಆಶಿಶ್ ಮಿಶ್ರಾ, ತಾನು ಅಲ್ಲಿ ಇರಲಿಲ್ಲ ಎಂದು ಹೇಳುತ್ತಿದ್ದಾರೆ.

ಈ ಮಧ್ಯೆ, ಸತತ ಆರನೇ ದಿನವಾದ ಭಾನುವಾರ ದೇಶಾದ್ಯಂತ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಹೆಚ್ಚಳವಾಗಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com