ಜಮ್ಮು-ಕಾಶ್ಮೀರದಲ್ಲಿ ಮುಂದುವರೆದ ಉಗ್ರರ ಹಾವಳಿ: ಶೋಪಿಯಾನ್ ನಲ್ಲಿ ಮತ್ತೊಂದು ಸೇನಾ ಕಾರ್ಯಾಚರಣೆ, ಓರ್ವ ಉಗ್ರ ಹತ

ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. 
ಭಾರತೀಯ ಸೇನೆ
ಭಾರತೀಯ ಸೇನೆ

ಶ್ರೀನಗರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ಹಾವಳಿ ಮುಂದುವರೆದಿದ್ದು, ಶೋಪಿಯಾನ್ ನಲ್ಲಿ ಭಾರತೀಯ ಸೇನೆ ಮತ್ತೊಂದು ಉಗ್ರ ನಿಗ್ರಹ ಕಾರ್ಯಾಚರಣೆ ಆರಂಭಿಸಿದೆ. 

ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಮತ್ತೆ ಎನ್ ಕೌಂಟರ್ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಭದ್ರತಾ ಪಡೆಗಳು ದಕ್ಷಿಣ ಕಾಶ್ಮೀರದ ಶೋಪಿಯಾನ್ ನ ಫಿರಿಪೋರಾ ಪ್ರದೇಶದಲ್ಲಿ ಉಗ್ರರು ಇರುವ ಬಗ್ಗೆ ಖಚಿತ ಮಾಹಿತಿ ಪಡೆದ ಆ ಪ್ರದೇಶವನ್ನು ಸುತ್ತುವರೆದಿದೆ.

ಅಲ್ಲದೆ ಆ ಪ್ರದೇಶದ ಒಂದೊಂದು ಮನೆಯಲ್ಲೂ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿದೆ. ಈ ವೇಳೆ ಭದ್ರತಾ ಪಡೆಗಳು ಶೋಧ ನಡೆಸುತ್ತಿದ್ದಂತೆ, ಉಗ್ರರು ಅವರ ಮೇಲೆ ಗುಂಡು ಹಾರಿಸಿದ್ದು ಸೇನೆ ಕೂಡ ಪ್ರತಿದಾಳಿ ನಡೆಸಿದೆ. ಈ ವೇಳೆ ಓರ್ವ ಉಗ್ರಗಾಮಿ ಹತನಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪ್ರಸ್ತುತ ಪ್ರಾಥಮಿಕ ವರದಿಗಳ ಅನ್ವಯ ಆ ಪ್ರದೇಶದಲ್ಲಿ ಇಬ್ಬರು ಅಥವಾ ಅದಕ್ಕಿಂತ ಹೆಚ್ಚು ಉಗ್ರರು ಅವಿತಿರುವ ಶಂಕೆ ಇದ್ದು, ಘಟನಾ ಪ್ರದೇಶಕ್ಕೆ ಹೆಚ್ಚುವರಿ ಪಡೆಗಳು ಆಗಮಿಸುವ ಸಾಧ್ಯತೆ ಇದೆ ಎನ್ನಲಾಗಿದೆ. 

ಈ ಹಿಂದೆ ನಿನ್ನೆ ತಡರಾತ್ರಿ ಇದೇ ಶೋಪಿಯಾನ್ ಜಿಲ್ಲೆಯ ಇಮಾಮ್ಸಾಹಿಬ್ ಪ್ರದೇಶದಲ್ಲಿ ಮತ್ತೊಂದು ಗುಂಡಿನ ಚಕಮಕಿ ನಡೆದಿತ್ತು, ಇದರಲ್ಲಿ ಮೂವರು ಉಗ್ರರನ್ನು ಹತ್ಯೆ ಮಾಡಲಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com