ಕೇಂದ್ರ ಸಚಿವ ಅಮಿತ್ ಶಾ ಪ್ರಯತ್ನದಿಂದ ಶಾಂತಿಯ ಹೊಸ ಯುಗ ಆರಂಭ: ರಾಷ್ಟ್ರೀಯ ಮಾನವ ಹಕ್ಕು ಅಧ್ಯಕ್ಷ ಮಿಶ್ರಾ
ಕೇಂದ್ರ ಸಚಿವ ಅಮಿತ್ ಶಾ ಅವರ ಅವಿರತ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು-ಸುವ್ಯವಸ್ಥೆಯ ಹೊಸ ಯುಗ ಆರಂಭವಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಹೇಳಿದರು.
Published: 12th October 2021 11:08 PM | Last Updated: 12th October 2021 11:11 PM | A+A A-

ಗೃಹ ಸಚಿವ ಅಮಿತ್ ಶಾ
ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಅವಿರತ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು-ಸುವ್ಯವಸ್ಥೆಯ ಹೊಸ ಯುಗ ಆರಂಭವಾಗಿದೆ ಎಂದು ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ(ಎನ್‌ಎಚ್‌ಆರ್‌ಸಿ) ಅಧ್ಯಕ್ಷ ನಿವೃತ್ತ ನ್ಯಾಯಮೂರ್ತಿ ಅರುಣ್ ಮಿಶ್ರಾ ಹೇಳಿದರು.
ಎನ್‌ಎಚ್‌ಆರ್‌ಸಿಯ 28ನೇ ಸಂಸ್ಥಾಪನಾ ದಿನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಿಶ್ರಾ ಅವರು ಭಾರತವನ್ನು ಬಲಿಷ್ಠ ಪ್ರಜಾಪ್ರಭುತ್ವ ರಾಷ್ಟ್ರವನ್ನಾಗಿ ರೂಪಿಸಿದ್ದಕ್ಕಾಗಿ ಅದರ ಶ್ರೇಯಸ್ಸು ಜನರು ಮತ್ತು ನಾಯಕತ್ವಕ್ಕೆ ಸಲ್ಲಬೇಕು ಎಂದರು.
ನಾನು ಆತ್ಮೀಯವಾಗಿ ಕೇಂದ್ರ ಸಚಿವ ಅಮಿತ್ ಶಾ ಅವರನ್ನು ಸ್ವಾಗತಿಸುತ್ತೇನೆ. ನಿಮ್ಮ ಅವಿರತ ಪ್ರಯತ್ನದಿಂದಾಗಿ ಜಮ್ಮು ಮತ್ತು ಕಾಶ್ಮೀರ ಹಾಗೂ ಈಶಾನ್ಯ ರಾಜ್ಯಗಳಲ್ಲಿ ಶಾಂತಿ ಮತ್ತು ಕಾನೂನು-ಸುವ್ಯವಸ್ಥೆಯ ಹೊಸ ಯುಗ ಆರಂಭವಾಗಿದೆ ಎಂದರು.
20ನೇ ಶತಮಾನದಲ್ಲಿ ಪ್ರಪಂಚದಾದ್ಯಂತ ರಾಜಕೀಯ ದೌರ್ಜನ್ಯದಿಂದಾಗಿ 12 ಕೋಟಿ ಜನರು ಸಾವನ್ನಪ್ಪಿದ್ದಾರೆ. ಮುಗ್ಧ ಜನರನ್ನು ಹತ್ಯೆ ಮಾಡುವ ಕ್ರೂರಿಗಳನ್ನು ನಾವು ವಿಜೃಂಭಿಸಲಾಗದು. ಅಂಥ ಭಯೋತ್ಪಾದಕರನ್ನು ಸ್ವಾತಂತ್ರ್ಯ ಹೋರಾಟಗಾರರು ಎನ್ನಲಾಗದು. ಮಾನವ ಹಕ್ಕುಗಳನ್ನು ಪ್ರತಿಪಾದಿಸುವವರು ರಾಜಕೀಯ ಹಿಂಸಾಚಾರವನ್ನು ಖಂಡಿಸಬೇಕು ಎಂದರು.