2-18 ವರ್ಷದ ಮಕ್ಕಳಿಗಾಗಿ ಕೊರೋನಾ ಲಸಿಕೆ: ಕೋವ್ಯಾಕ್ಸಿನ್ ನೀಡಲು ಡಿಸಿಜಿಐಗೆ ತಜ್ಞರ ಸಮಿತಿ ಶಿಫಾರಸ್ಸು

ಭಾರತದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಡಿಸಿಜಿಐಗೆ ಶಿಫಾರಸು ಮಾಡಿದೆ.
ಮಕ್ಕಳಿಗೆ ಕೋವಿಡ್ ಲಸಿಕೆ
ಮಕ್ಕಳಿಗೆ ಕೋವಿಡ್ ಲಸಿಕೆ

ನವದೆಹಲಿ: ಭಾರತದ ಕೇಂದ್ರ ಔಷಧ ಪ್ರಾಧಿಕಾರದ ತಜ್ಞರ ಸಮಿತಿಯು 2 ರಿಂದ 18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್‌ನ ಕೊವಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಕೆಲವು ಷರತ್ತುಗಳೊಂದಿಗೆ ಅನುಮತಿ ನೀಡುವಂತೆ ಡಿಸಿಜಿಐಗೆ ಶಿಫಾರಸು ಮಾಡಿದೆ.

ಹೈದರಾಬಾದ್ ಮೂಲದ ಭಾರತ್ ಬಯೋಟೆಕ್, ಕೋವಿಡ್ ಲಸಿಕೆ ಕೊವಾಕ್ಸಿನ್‌ ಅನ್ನು 2 ರಿಂದ 18 ವರ್ಷದೊಳಗಿನ ಮಕ್ಕಳಲ್ಲಿ ಬಳಸಲು 2/3 ಹಂತದ ಪರೀಕ್ಷೆಗಳನ್ನು ಪೂರ್ಣಗೊಳಿಸಿದ್ದು, ಲಸಿಕೆಯ ತುರ್ತು ಬಳಕೆಯ ದೃಢೀಕರಣಕ್ಕಾಗಿ, ಪರಿಶೀಲನೆ ಮತ್ತು ನಂತರದ ಅನುಮೋದನೆಗಾಗಿ ಈ ತಿಂಗಳ ಆರಂಭದಲ್ಲಿ ಡೇಟಾವನ್ನು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಗೆ ಸಲ್ಲಿಸಿತ್ತು. 

ಕೋವಿಡ್ -19 ಕುರಿತು ವಿಷಯ ತಜ್ಞರ ಸಮಿತಿಯು ಡೇಟಾವನ್ನು ಪರಿಶೀಲಿಸಿದೆ ಮತ್ತು ಸೋಮವಾರ ತುರ್ತು ಬಳಕೆ ದೃಢೀಕರಣ ಅರ್ಜಿಯ ಕುರಿತು ಚರ್ಚಿಸಿತು.

"ವಿವರವಾದ ಚರ್ಚೆಯ ನಂತರ, ಕೆಲವು ಪರಿಸ್ಥಿತಿಗಳಿಗೆ ಒಳಪಟ್ಟು ತುರ್ತು ಸಂದರ್ಭಗಳಲ್ಲಿ ನಿರ್ಬಂಧಿತ ಬಳಕೆಗಾಗಿ 2 ರಿಂದ 18 ವರ್ಷ ವಯಸ್ಸಿನವರಿಗೆ ಲಸಿಕೆಯ ಮಾರುಕಟ್ಟೆ ಅನುಮತಿಯನ್ನು ನೀಡಲು ಸಮಿತಿಯು ಶಿಫಾರಸು ಮಾಡಿದೆ" ಎಂದು ಎಸ್‌ಇಸಿ ತನ್ನ ಶಿಫಾರಸುಗಳಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ.

ಅಂತಿಮ ಅನುಮೋದನೆಗಾಗಿ ಶಿಫಾರಸುಗಳನ್ನು ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಗೆ ರವಾನಿಸಲಾಗಿದೆ.

ಡಿಸಿಜಿಐ ಅಧಿಕೃತ ಮಾಹಿತಿಯ ನಿರೀಕ್ಷೆ
ಅತ್ತ ತಜ್ಞರ ಸಮಿತಿಯ ಶಿಫಾರಸ್ಸಿಗೆ ಮನ್ನಣೆ ನೀಡಿರುವ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ 2-18 ವರ್ಷದೊಳಗಿನ ಮಕ್ಕಳಿಗೆ ಭಾರತ್ ಬಯೋಟೆಕ್ ಸಂಸ್ಥೆಯ ಕೋವ್ಯಾಕ್ಸಿನ್ ಕೋವಿಡ್ ಲಸಿಕೆ ನೀಡಲು ಅನುಮೋದನೆ ನೀಡಿದೆ ಎನ್ನಲಾಗಿದೆಯಾದರೂ ಈ ಕುರಿತು ಅಧಿಕೃತ ಹೇಳಿಕೆ ಹೊರಬಿದ್ದಿಲ್ಲ.

ಈ ಕುರಿತಂತೆ ವಿಷಯ ತಜ್ಞರ ಸಮಿತಿಯ ಸಭೆಯಲ್ಲಿ ಇಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದ್ದು, ಮಕ್ಕಳಿಗೂ ಕೊರೋನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ನೀಡುವ ಸಾಧ್ಯತೆ ಇದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com